
ಮುಂಬಯಿಯ ಹೋಟೆಲು ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಹರೀಶ್ ಶೆಟ್ಟಿ ಪಡುಕುಡೂರು ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ.
ಇವರು ಈ ಹಿಂದೆ ಪೋಷಕ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು ಮುಂದೆ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದಯೆ ಇವರ ಮತ್ತು ಇವರ ಕುಟುಂಬದ ಮೇಲೆ ಸದಾ ಇರಲಿ ಎಂದು ಹಾರೈಸಿ, ಒಕ್ಕೂಟದ ಪರವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.






























































































































