ಭಾರತೀಯ ಬ್ಯಾಡ್ಮಿಂಟನ್ ಆಟಗಾರ, ಖೇಲ್ ರತ್ನ ಪುರಸ್ಕೃತ ಚಿರಾಗ್ ಶೆಟ್ಟಿ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದರು. ದೇವಸ್ಥಾನದ ಪ್ರಧಾನ ಆರ್ಚಕ ವೇ. ಶ್ರೀನಿವಾಸ ತಂತ್ರಿ ಕಲ್ಯ ಅವರು ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನ ಸಮಿತಿ ಸದಸ್ಯ ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಶೇರಿಗಾರ್ ಉಪಸ್ಥಿತರಿದ್ದರು.

ಚಂದ್ರಶೇಖರ ಶೆಟ್ಟಿ ಮತ್ತು ಸುಜಾತಾ ಶೆಟ್ಟಿ ದಂಪತಿಯ ಪುತ್ರನಾಗಿರುವ 27 ವರ್ಷದ ಚಿರಾಗ್ ಶೆಟ್ಟಿ ಅವರು ಪುರುಷರ ಡಬಲ್ಸ್ ನಲ್ಲಿ (ಸಾತ್ವಿಕ್ ರಾಜ್ ರಾಂಕಿ ರೆಡ್ಡಿ ಜತೆ) ಏಷ್ಯಾನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ಸ್ ಮತ್ತು ಏಷ್ಯಾನ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.