ಶ್ರೀ ಅಯ್ಯಪ್ಪ ಸ್ವಾಮೀ ದೇವಸ್ಥಾನ ಕಾತ್ರಜ್ ಇದರ ಆಡಳಿತ ಮಂಡಳಿ, ಶ್ರೀ ಅಯ್ಯಪ್ಪ ಸ್ವಾಮೀ ಸೇವಾ ಸಂಘದ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನದಂಗವಾಗಿ ಯೋಗ ದಿನಾಚರಣೆಯು ಜೂನ್ 21ರಂದು ಬೆಳಿಗ್ಗೆ ಗಂಟೆ 7.00 ರಿಂದ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

ಪುಣೆಯ ಯೋಗ ಶಿಕ್ಷಕಿ ಶಾಲಿನಿ ವಿಶ್ವನಾಥ್ ಪೂಜಾರಿಯವರ ನೇತೃತ್ವದಲ್ಲಿ ನಡೆಯಲಿರುವ ಈ ಯೋಗ ದಿನಾಚರಣೆಯಲ್ಲಿ ಹೆಚ್ಚಿನ ಸಂಖ್ಯೆಯ ತುಳು ಕನ್ನಡ ಬಾಂಧವರು ಪಾಲ್ಗೊಳ್ಳುವಂತೆ ಶ್ರೀ ಅಯ್ಯಪ್ಪ ಸ್ವಾಮೀ ಸೇವಾ ಸಂಘದ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಸುಭಾಶ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮಹಿಳಾ ಭಕ್ತ ವೃಂದದವರು ವಿನಂತಿಸಿಕೊಂಡಿರುತ್ತಾರೆ.
ವರದಿ : ಹರೀಶ್ ಮೂಡಬಿದಿರೆ, ಪುಣೆ