ಮಧ್ಯ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ 2025 – 26 ನೇ ಸಾಲಿನ ಶೈಕ್ಷಣಿಕ ವರ್ಷದ ಯಕ್ಷಧ್ರುವ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿಯನ್ನು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಉದ್ಘಾಟಿಸಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪ್ರಪುಲ್ಲ ಪಂಜ, ಶಾಲೆಯ ಮುಖ್ಯ ಶಿಕ್ಷಕಿ ಕುಸುಮಾ, ಸುರತ್ಕಲ್ ಘಟಕದ ಪಟ್ಲ ಫೌಂಡೇಶನ್ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ , ಯಕ್ಷ ಗುರು ಪೂರ್ಣಿಮ ಯತೀಶ್ ರೈ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷೆ ಕಾವ್ಯ, ಸದಸ್ಯರಾದ ಅನಿಲ್ ಸೂರಿಂಜೆ, ಶಶಿಕಲಾ, ಪರಮೇಶ್ವರ, ರಿತೇಶ್ ಶೆಟ್ಟಿ, ಕೇಶವ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರತ್ಕಲ್ ಘಟಕದ ಪಟ್ಲ ಫೌಂಡೇಶನ್ ಉಪಾಧ್ಯಕ್ಷ ಲೀಲಾಧರ ಶೆಟ್ಟಿ ಕಟ್ಲ ಇವರು ವಹಿಸಿದ್ದರು. ಶಿಕ್ಷಕಿ ಸುಜಯ ಧನ್ಯವಾದ ಸಮರ್ಪಿಸಿ, ಶಿಕ್ಷಕ ಹರೀಶ್ ಕಾರ್ಯಕ್ರಮ ನಿರೂಪಿಸಿದರು.