ಬಂಟ ಸಮಾಜದವರು ಮುಂದುವರಿದಿದ್ದಾರೆ ಎನ್ನುವುದು ತಪ್ಪು. ಬಂಟರಲ್ಲಿ ಅರ್ಧಾಂಶದಷ್ಟು ಬಡವರಿದ್ದಾರೆ. ಎಲ್ಲಾ ಬಂಟರ ಸಂಘಗಳು ಶ್ರೀಮಂತವಾಗಿದ್ದು ಬಡವರಿಗೆ, ಆರ್ಥಿಕ ಶೈಕ್ಷಣಿಕವಾಗಿ ನೆರವಾಗಲು ಸರ್ವೆ ನಡೆಸಬೇಕು. ಸಂಘಗಳು ನೀಡುವ ಸಹಾಯ ದುರುಪಯೋಗವಾಗದಂತೆ ಎಚ್ಚರಿಕೆಯೂ ಅಗತ್ಯ ಎಂದು ಬೆಂಗಳೂರಿನ ಡಿವೈಎಸ್ಪಿ ದಿನಕರ ಶೆಟ್ಟಿ ಪಡ್ರೆ ಅಭಿಪ್ರಾಯಪಟ್ಟರು. ಸುರತ್ಕಲ್ ಬಂಟರ ಭವನದಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರತ್ಕಲ್ ಬಂಟರ ಸಂಘದ 25ನೇ ವಾರ್ಷಿಕ ಮಹಾಸಭೆ, ಅಭಿನಂದನೆ, ಸಹಾಯಹಸ್ತ ವಿತರಣೆ, ವಿದ್ಯಾರ್ಥಿವೇತನ ವಿತರಣೆ ಸಮಾರಂಭದಲ್ಲಿ ಮಾತನಾಡಿದರು. ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಿದ್ದರು. ಮುಂಬಯಿ ಹೇರಂಭ ಇಂಡಸ್ಟ್ರೀಸ್ ಸಂಸ್ಥೆಯ ಸಿಎಂಡಿ ಡಾ| ಕನ್ಯಾನ ಸದಾಶಿವ ಶೆಟ್ಟಿ, ಪೂಣೆ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ ಮಾತನಾಡಿದರು. ಡಾ| ಕನ್ಯಾನ ಸದಾಶಿವ ಶೆಟ್ಟಿ, ದಿನಕರ ಶೆಟ್ಟಿ ಪಡ್ರೆ, ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಸುರತ್ಕಲ್ ಬಂಟರ ಸಂಘದ ಚುಕ್ಕಾಣಿ ಹಿಡಿದ ಎಲ್ಲಾ ಮಾಜಿ ಅಧ್ಯಕ್ಷರುಗಳನ್ನು ಈ ಸಂಧರ್ಭದಲ್ಲಿ ಗೌರವಿಸಲಾಯಿತು. ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ್ ಎಸ್. ಪೂಂಜ, 2025- 27 ರ ಸಾಲಿನ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಉಪಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಕೋಶಾಧಿಕಾರಿ ಅವಿನಾಶ್ ಶೆಟ್ಟಿ, ಪದಾಧಿಕಾರಿಗಳಾದ ಸುಜೀರ್ ಶೆಟ್ಟಿ, ಶಿಶಿರ್ ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಮಧ್ಯ, ಜಯರಾಮ ಶೆಟ್ಟಿ, ಮಹಿಳಾ ವೇದಿಕೆ ಅಧ್ಯಕ್ಷೆ ಭವ್ಯ ಎ. ಶೆಟ್ಟಿ ಮತ್ತಿತರರಿದ್ದರು. ನಾನಾ ಕ್ಷೇತ್ರಗಳ ಸಾಧಕರಿಗೆ ಅಭಿನಂದನೆ, ವಿದ್ಯಾರ್ಥಿಗಳಿಗೆ ದತ್ತಿನಿಧಿ ನೆರವು ವಿತರಣೆ, ಸಂಘದ ವ್ಯಾಪ್ತಿಯ ಸಮಾಜದ, ಇತರ ಸಮಾಜದ 80 ವಿದ್ಯಾರ್ಥಿಗಳಿಗೆ 1.67 ಲಕ್ಷ ರೂ. ವಿದ್ಯಾರ್ಥಿ ವೇತನ ಸಾಂಕೇತಿಕ ವಿತರಣೆ, ವಿಶೇಷ ಚೇತನರಿಗೆ ಸಹಾಯ ಹಸ್ತಾಂತರಿಸಲಾಯಿತು. ಪ್ರಧಾನ ಕಾರ್ಯದರ್ಶಿ ಲೀಲಾಧರ್ ಶೆಟ್ಟಿ ಕಟ್ಲ ಪ್ರಾಸ್ತಾವಿಕ ಮಾತನಾಡಿದರು. ಪುಷ್ಪರಾಜ ಶೆಟ್ಟಿ ಕುಡುಂಬೂರು ವಂದಿಸಿದರು. ರಾಜೇಶ್ವರಿ ಡಿ. ಶೆಟ್ಟಿ ಮತ್ತು ಡಾ. ಸುಧಾ ಚಂದ್ರಶೇಖರ್ ಶೆಟ್ಟಿ ನಿರೂಪಿಸಿದರು.