ಕಣಂಜಾರು ಗ್ರಾಮದ ಮಡಿಬೆಟ್ಟು ಅನುದಾನಿತ ಶಾಲಾ ಮಕ್ಕಳಿಗೆ ಉಚಿತವಾಗಿ ಮೈತ್ರಿ ಸೇವಾ ಸಂಘದ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಪೆಲತ್ತೂರು ಫ್ರೆಂಡ್ಸ್ ವತಿಯಿಂದ ನೋಟ್ ಪುಸ್ತಕಗಳ ವಿತರಣಾ ಸಮಾರಂಭ ನೆರವೇರಿತು. ಈ ಸಂದರ್ಭದಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಶ್ರೀಯುತ ಶಿವಪ್ರಸಾದ್ ಹೆಗ್ಡೆ, ಟ್ರಸ್ಟಿನ ಸದಸ್ಯರಾದ ವಿಕ್ರಂ ಹೆಗ್ಡೆ, ಶಶಿಧರ ಶೆಟ್ಟಿ ಕೆಂಜೂರು, ಹರಿದಾಸ ಹೆಗ್ಡೆ, ಶಾಲಾ ಸಂಚಾಲಕರಾದ ಸಿ.ಎ. ಚಂದನ್ ಹೆಗ್ಡೆ, ಕೋಶಾಧಿಕಾರಿ ಪ್ರಕಾಶ್ ಪ್ರಭು, ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಯುತ ಸುಧೀರ್ ಹೆಗ್ಡೆ, ನೀರೆ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭು, ಉಪಾಧ್ಯಕ್ಷೆ ವಿದ್ಯಾ ಶೆಟ್ಟಿ, ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷ ಸುರೇಶ್ ಶೆಟ್ಟಿ, ಮೈತ್ರಿ ಸಂಘದ ಅಧ್ಯಕ್ಷರಾದ ಹರಿಶ್ಚಂದ್ರ ಶೆಟ್ಟಿ ಹಾಗೂ ಕಾರ್ಯದರ್ಶಿ ರಮೇಶ್ ಕಲ್ಲೊಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಂಸ್ಥೆಯ ಟ್ರಸ್ಟಿಯವರಾದ ವಿಕ್ರಂ ಹೆಗ್ಡೆಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೈತ್ರಿ ಸೇವಾ ಸಂಘ ಹಾಗೂ ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷರು ಸಂಸ್ಥೆಗೆ ಹಾಗೂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರುಗಳು, ಪಂಚಾಯತ್ ಸದಸ್ಯ ಶಿವಪ್ರಸಾದ್ ರಾವ್, ಪ್ರಭಾರ ಮುಖ್ಯ ಶಿಕ್ಷಕ ಅಶ್ವತ್ಥ್ ಭಾರಧ್ವಾಜ್ ಕೆ, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು, ಶಾಲೆಯ ಅಭಿಮಾನಿಗಳು ಉಪಸ್ಥಿತರಿದ್ದರು.
