ಸರಕಾರಿ ಪ್ರೌಢಶಾಲೆ ನಾಲ್ಯಪದವು ಶಕ್ತಿನಗರದಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯಕ್ಷಗಾನ ಶಿಕ್ಷಣ ಅಭಿಯಾನವು ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಘಟಕದ ಸಹಯೋಗದಲ್ಲಿ 2025 – 26ನೇ ಸಾಲಿನ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆಯು ಜೂನ್ 28 ರಂದು ಶನಿವಾರ ಬೆಳಗ್ಗೆ ಗಂಟೆ 9.30ಕ್ಕೆ ಸರಿಯಾಗಿ ನೆರವೇರಿತು.

ಪಟ್ಲ ಟ್ರಸ್ಟಿನ ಕೇಂದ್ರೀಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಲಯನ್ ಪ್ರದೀಪ್ ಆಳ್ವ ಕದ್ರಿ, ಮಂಗಳೂರು ಘಟಕದ ಅಧ್ಯಕ್ಷರಾದ ಲಯನ್ ತಾರಾನಾಥ ಶೆಟ್ಟಿ, ಕೋಶಾಧಿಕಾರಿ ಶ್ರೀ ಗೋಪಿನಾಥ ಶೆಟ್ಟಿ, ಪದಾಧಿಕಾರಿಗಳಾದ ಶ್ರೀ ಸಂತೋಷ್ ಶೆಟ್ಟಿ, ಯಕ್ಷಗುರು ಶ್ರೀ ವಿಶ್ವನಾಥ ಶೆಟ್ಟಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಜೆ, ಪದವು ಫ್ರೆಂಡ್ಸ್ ಅಧ್ಯಕ್ಷರಾದ ಕುಶಲ್ ಕುಮಾರ್, ವಿದ್ಯಾ ದೀವಿಗೆ ಟ್ರಸ್ಟ್ ಅಧ್ಯಕ್ಷರಾದ ದೇವಾನಂದ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಟೋನಿ ಪಿಂಟೋ, ಶಾಲಾ ಸಂಚಾಲಕರದ ಅಶೋಕ್ ನಾಯ್ಕ್, ಶಾಲಾ ಮುಖ್ಯೋಪಾಧ್ಯಾಯನಿ ದಾಕ್ಷಯಣಿ ಈ ಸಂಧರ್ಭ ಉಪಸ್ಥಿತರಿದ್ದರು.