ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ನಡೆಯಲಿರುವ 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು. ಕಚೇರಿ ಉದ್ಘಾಟಿಸಿದ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಮಾತನಾಡಿ ಶುಭ ಹಾರೈಸಿದರು. ನಿಕಟಪೂರ್ವ ಕಾರ್ಪೋರೇಟರ್ ಮನೋಹರ ಶೆಟ್ಟಿ ಶುಭ ಹಾರೈಸಿದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಪ್ರಧಾನ ಕಾರ್ಯದರ್ಶಿ ಕೆ.ಎಂ ಶೆಟ್ಟಿ, ಕೋಶಾಧಿಕಾರಿ ರಾಮ್ ಮೋಹನ್ ರೈ, ಸಿದ್ಧಿವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಡಾ. ಆಶಾ ಜ್ಯೋತಿ ರೈ, ರವಿರಾಜ್ ಶೆಟ್ಟಿ ನಿಟ್ಟೆ ಗುತ್ತು, ಕೃಷ್ಣಪ್ರಸಾದ್ ರೈ, ಗಣೇಶೋತ್ಸವ ಸಮಿತಿಯ ಸಂಚಾಲಕರಾದ ದಿವಾಕರ ಸಾಮಾನಿ, ಮನೀಶ್ ರೈ ಅಡ್ಯಾರ್, ಸಂತೋಷ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ, ತಾಲೂಕು ಸಮಿತಿಯ ಸಂಚಾಲಕ ವಸಂತ ಶೆಟ್ಟಿ, ಎಂ ಸುಂದರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಕಿರಣ್ ಪಕ್ಕಳ ಸ್ವಾಗತಿಸಿದರು.