ಪುಣೆಯ ಖ್ಯಾತ ಮಕ್ಕಳ ತಜ್ಞ, ಸಮಾಜರತ್ನ ಡಾ. ಸುಧಾಕರ್ ಶೆಟ್ಟಿಯವರು ಮೂಡಬಿದಿರೆಯ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜ್ ನಲ್ಲಿ Approach to Pediatric pratice ವಿಷಯದ ಬಗ್ಗೆ ಅತಿಥಿ ಉಪನ್ಯಾಸಕರಾಗಿ ವಿಶೇಷ ಉಪನ್ಯಾಸ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸುಧಾಕರ್ ಶೆಟ್ಟಿಯವರು ಸಮಾಜ ಸೇವಕರಾಗಿ ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆ, ಕೆಲಸ ಕಾರ್ಯಗಳು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಜನ ಮನ್ನಣೆ ಗಳಿಸಿದೆ. ಇವರು ನಟಿಸಿದ ‘ಹೇ ಪ್ರಭು’ ಚಲನಚಿತ್ರ ಸದ್ಯದಲ್ಲೇ ಬಿಡುಗಡೆಗೊಳ್ಳಲಿದೆ.
