ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಸಂಸ್ಥೆಯ ಅಧ್ಯಕ್ಷರ ಹುಟ್ಟು ಹಬ್ಬವನ್ನು ಅತ್ಯಂತ ಸಂಭ್ರಮದಿ0ದ ಆಚರಿಸಲಾಯಿತು. ಶಾಲಾ ಸಂಸ್ಥಾಪಕ ಪ್ರಕಾಶ್ಚಂದ್ರ ಶೆಟ್ಟಿಯವರು ದೀಪ ಬೆಳಗಿ, ಕೇಕ್ ಕತ್ತರಿಸಿ ಮಾತನಾಡಿ ನಾನು ತುಂಬಾ ಅದೃಷ್ಟವoತ. ಇಷ್ಟೊಂದು ಪ್ರೀತಿ, ಗೌರವ ಎಲ್ಲರಿಗೂ ಸಿಗಲು ಸಾಧ್ಯವಿಲ್ಲ. ನಾನು ಪ್ರತಿನಿತ್ಯ ನನ್ನ ತಂದೆ- ತಾಯಿಯರನ್ನು ಸ್ಮರಿಸಿ ದಿನಚರಿಯನ್ನು ಪ್ರಾರಂಭಿಸುತ್ತೇನೆ. ನೀವೆಲ್ಲರೂ ನಿಮ್ಮ ಪೋಷಕರನ್ನು ಪ್ರೀತಿಸಿ, ಗೌರವಿಸಿ, ನಿಮ್ಮ ಕೆಲಸಗಳನ್ನು ಇಷ್ಟಪಟ್ಟು ಮಾಡಿ.

ಮುಂದಿನ ದಿನಗಳಲ್ಲಿ ನಿಮ್ಮ ಜೀವನದ ಯಶೋಗಾಥೆಯನ್ನು ನಮ್ಮ ಜೊತೆ ಹಂಚಿಕೊಳ್ಳಿ ಎoದರು. ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಅಧ್ಯಕ್ಷರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿ ಮಾತನಾಡಿ ತಾವು ಕಟ್ಟಡಗಳನ್ನು ನಿರ್ಮಾಣ ಮಾಡುವುದರ ಮೂಲಕ ವೃತ್ತಿ ಜೀವನವನ್ನು ಪ್ರಾರಂಭಿಸಿ ಇಂದು ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ಕಟ್ಟುತ್ತಿದ್ದೀರಿ. ನಿಮ್ಮ ಈ ಕಾರ್ಯ ವೈಖರಿ ನಮಗೆಲ್ಲರಿಗೂ ಸ್ಫೂರ್ತಿ ಎಂದರು. ಶಾಲಾ ಶಿಕ್ಷಕವೃಂದ, ವಿದ್ಯಾರ್ಥಿಗಳು ಸಿಬ್ಬಂದಿವರ್ಗ ಗ್ರೀಟಿಂಗ್ಸ್, ಹೂವಿನ ಗುಚ್ಛವನ್ನು ನೀಡಿ ಅಧ್ಯಕ್ಷರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ರೇವತಿ ಕೆ, ಶ್ರೀಮಾ ಪ್ರಣವ್ ಶೆಟ್ಟಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.