ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಇವರು ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಅಂಗವಾಗಿ ಯಡ್ತರೆ ನೆಲ್ಯಾಡಿ ಜೆ.ಎನ್.ಆರ್ ಹಾಲ್ ನಲ್ಲಿ ಕೆಸರಲ್ಲೊಂದು ದಿನ ಗಮ್ಮತ್ ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಐಕಳ ಹರೀಶ್ ಶೆಟ್ಟಿಯವರು, ಕುಂದಾಪುರದ ಭಾಷೆ ಸಂಸ್ಕೃತಿಯನ್ನು ಉಳಿಸುವಲ್ಲಿ ಪ್ರತಿಷ್ಠಾನವು ಅರ್ಥಪೂರ್ಣವಾದ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ನಮ್ಮ ಸಂಸ್ಕೃತಿಯನ್ನು ಯುವ ಪೀಳಿಗೆಗೆ ತಿಳಿಸುವ ಈ ಕಾರ್ಯಕ್ರಮದ ಮೂಲಕ ಸಂಸ್ಕೃತಿ ಜಾಗೃತವಾಗುತ್ತದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಐಕಳ ಹರೀಶ್ ಶೆಟ್ಟಿ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕೋಶಾಧಿಕಾರಿ ಉಳ್ತೂರು ಮೋಹನದಾಸ ಶೆಟ್ಟಿಯವರನ್ನು ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಕೆ ಜಯಪ್ರಕಾಶ್ ಹೆಗ್ಡೆ, ಬೈಂದೂರು ಮಂಡಲ ಬಿಜೆಪಿ ಮಾಜಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರತಿಷ್ಠಾನದ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ, ದಿವಾಕರ್ ಶೆಟ್ಟಿ ಬೈಂದೂರು, ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಮತ್ತಿತರರು ಉಪಸ್ಥಿತರಿದ್ದರು.