ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು, ಕಾರ್ಕಳ ಹೆಬ್ರಿ ತಾಲೂಕು ಸಮಿತಿ, ಕಾರ್ಕಳ ತಾಲೂಕು ಮಹಿಳಾ ಬಂಟರ ಸಂಘ ಕಾರ್ಕಳ ಹಾಗೂ ಕಾರ್ಕಳ ತಾಲೂಕು ಯುವ ಬಂಟರ ಸಂಘ ಇವರ ಸಹಭಾಗಿತ್ವದಲ್ಲಿ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಆಟಿಡೊಂಜಿ ಕೆಸರ್ದ ಕೂಟ ಕಾರ್ಯಕ್ರಮವು ಆಗಸ್ಟ್ 10 ಭಾನುವಾರದಂದು ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಸಿ.ಎ ಅಶೋಕ್ ಕುಮಾರ್ ಶೆಟ್ಟಿ ಎಂ ಸಮಾರಂಭದ ಉದ್ಘಾಟನೆಯನ್ನು ಮಾಡಿದರು. ಮುಖ್ಯ ಅತಿಥಿಯಾಗಿ ಬೆಂಗಳೂರು ಬಂಟರ ಸಂಘದ ವಿದ್ಯಾರ್ಥಿ ವೇತನ ಹಾಗೂ ಪ್ರಶಸ್ತಿ ಸಮಿತಿಯ ಛೇರ್ಮನ್ ಉಮೇಶ್ ಕುಮಾರ್ ಶೆಟ್ಟಿ, ಕಾರ್ಕಳ ಪುರಸಭೆಯ ವಿಶ್ರಾಂತ ಮುಖ್ಯ ಅಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಪೆರ್ವಾಜೆ, ಕಾರ್ಕಳ ಹೆಬ್ರಿ ತಾಲೂಕು ಬಂಟರ ಸಂಘದ ನಿಕಟ ಪೂರ್ವ ಸಂಚಾಲಕ ಮಣಿರಾಜ್ ಶೆಟ್ಟಿ, ಕಾರ್ಕಳ ಬಾರ್ ಎಸೋಸಿಯೇಷನ್ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ಖ್ಯಾತ ವೈದ್ಯ ಡಾ. ರವಿರಾಜ್ ಶೆಟ್ಟಿ, ಶ್ರೀಮತಿ ವೃಂದಾ ಹರಿಪ್ರಕಾಶ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ಹಿರಿಯಂಗಡಿ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು, ಕಾರ್ಕಳ ಹೆಬ್ರಿ ತಾಲೂಕು ಸಮಿತಿಯ ಸಂಚಾಲಕ, ಉದ್ಯಮಿಗಳಾದ ವಿಜಯ ಶೆಟ್ಟಿ, ಕಾರ್ಕಳ ತಾಲೂಕು ಬಂಟರ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಎನ್ ಹೆಗ್ಡೆ ಕುಂಟಾಡಿ, ಕಾರ್ಕಳ ತಾಲೂಕು ಯುವ ಬಂಟರ ಸಂಘ ಕಾರ್ಕಳದ ಅಧ್ಯಕ್ಷ ಅವಿನಾಶ್ ಜಿ ಶೆಟ್ಟಿ, ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲು, ತಾಲೂಕು ಸಮಿತಿಯ ಉಪ ಸಂಚಾಲಕರಾದ ಬೂತುಗುಂಡಿ ಕರುಣಾಕರ ಶೆಟ್ಟಿ, ಮಾತೃ ಸಂಘ ಕಾರ್ಕಳ ಹೆಬ್ರಿ ತಾಲೂಕು ಸಮಿತಿ ಸದಸ್ಯರು, ಹೆಬ್ರಿ ವಲಯದ ಬಂಟರ ಸಂಘದ ಅಧ್ಯಕ್ಷರಾದ ಹರ್ಷ ಶೆಟ್ಟಿ ಹಾಗೂ ಕಾರ್ಕಳ ತಾಲೂಕು ಮಹಿಳಾ ಬಂಟರ ಸಂಘದ ಪದಾಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.
ಸಾಧಕರಿಗೆ ಸನ್ಮಾನ ಹಾಗೂ 2024- 25 ರ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ರಾಜ್ಯದಲ್ಲಿ 10 ರ್ಯಾಂಕ್ ಒಳಗೆ ಬಂದ ವಿದ್ಯಾರ್ಥಿಗಳಿಗೆ ಸನ್ಮಾನ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮಾಡಲಾಯಿತು. ಪ್ರಶಾಂತ್ ಶೆಟ್ಟಿ ಪರಪಾಡಿ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು. ಶ್ರೀಮತಿ ಶಾಲಿನಿ ಡಿ ಆಳ್ವ ಇವರು ಪ್ರಾಸ್ತಾವಿಕ ಮಾತುಗಳನ್ನು ಆಡಿ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ ಜಯಂತಿ ಎಸ್ ಶೆಟ್ಟಿ ಕುಕ್ಕುಂದೂರು ಧನ್ಯವಾದವನಿತ್ತರು.