ಬಂಟರ ಸಂಘ ಅಶೋಕನಗರ ಉರ್ವಾ ಇದರ ಆಶ್ರಯದಲ್ಲಿ ಮರಿಯಾಲಡೊಂಜಿ ಐತಾರ, ಆಟಿದ ಕೂಟ ಕಾರ್ಯಕ್ರಮ ಉರ್ವಾಸ್ಟೋರ್ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಇತ್ತೀಚಿಗೆ ಜರಗಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಸಾಗರ ಬಂಟರ ಸಂಘದ ಅಧ್ಯಕ್ಷ ಸುಧೀರ್ ಶೆಟ್ಟಿ ಹಕ್ಲಾಡಿ ಅವರು ಮಾತನಾಡಿ, ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಉಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಅನುಕರಣೆಯ ಎಂದರು.

ಮುಖ್ಯ ಅತಿಥಿಯಾಗಿದ್ದ ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಪ್ರಸಾದ್ ಶೆಟ್ಟಿ ಅವರು ಮಾತನಾಡಿ, ಆಟಿ ಕೂಟದಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಿಳಿಸುವ ಪ್ರಯತ್ನ ಶ್ಲಾಘನೀಯ ಎಂದರು. ಮುಖ್ಯ ಅತಿಥಿಗಳಾಗಿ ಕೆಎಂಸಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಆಶ್ನಾ ಶೆಟ್ಟಿ, ಉದ್ಯಮಿಗಳಾದ ನಿತ್ಯಾನಂದ ಶೆಟ್ಟಿ, ವಿಜಯಲಕ್ಷ್ಮಿ ಮಲ್ಲಿ, ಶೇಖರ ಶೆಟ್ಟಿ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಟ್ರಸ್ಟಿ ದೇವದಾಸ್ ಹೆಗ್ಡೆ, ನಿಕಟಪೂರ್ವ ಕಾರ್ಪೊರೇಟರ್ ಜಯಲಕ್ಷ್ಮಿ ಶೆಟ್ಟಿ, ಬಂಟರ ಸಂಘದ ಗೌರವ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮೇಗಿನ ಮಾಲಾಡಿ, ಉಪಾಧ್ಯಕ್ಷೆ ನಳಿನಿ ವಿ ರೈ, ಕೋಶಾಧಿಕಾರಿ ಜೆ.ವಿ ಶೆಟ್ಟಿ, ಮಾಜಿ ಅಧ್ಯಕ್ಷ ಸದಾಶಿವ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಆರ್ಥಿಕವಾಗಿ ಹಿಂದುಳಿದ 20 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅರ್ಹರಿಗೆ ವೈದ್ಯಕೀಯ ನೆರವು ನೀಡಲಾಯಿತು. ಸಂಘದ ಅಧ್ಯಕ್ಷ ರವಿಚಂದ್ರ ಶೆಟ್ಟಿ ಅಶೋಕನಗರ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ವಂದಿಸಿದರು. ಸತೀಶ್ ಶೆಟ್ಟಿ ಕೋಡಿಯಾಲ್ ಬೈಲ್ ನಿರೂಪಿಸಿದರು. ಸನಿಹಾ ಶೆಟ್ಟಿ, ರಕ್ಷಾ ಶೆಟ್ಟಿ ಹಾಗೂ ರಾಜೇಶ್ ಶೆಟ್ಟಿ ಸಹಕರಿಸಿದರು. ಬಳಿಕ ತುಳುನಾಡಿನ ಸಾಂಪ್ರದಾಯಿಕ ಖಾದ್ಯಗಳನ್ನು ಉಣಬಡಿಸಲಾಯಿತು. ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.