ದಕ್ಷಿಣ ಕನ್ನಡ ಅಥ್ಲೆಟಿಕ್ಸ್ ಸಂಸ್ಥೆಯ ವತಿಯಿಂದ ನಡೆದ ದಕ್ಷಿಣ ಕನ್ನಡ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್ನ ವಿದ್ಯಾರ್ಥಿಗಳು 22 ಚಿನ್ನ, 21 ಬೆಳ್ಳಿ, 12 ಕಂಚಿನ ಪದಕದೊಂದಿಗೆ ಒಟ್ಟು 55 ಪದಕಗಳನ್ನು ಪಡೆದುಕೊಂಡರು. ಆಗಸ್ಟ್ 23 ರಿಂದ 25 ರವರೆಗೆ ಉಡುಪಿ ಜಿಲ್ಲೆಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಕಿರಿಯರ ಹಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನಿಂದ ಕಿರಿಯರ ವಿಭಾಗದಲ್ಲಿ 60 ವಿದ್ಯಾರ್ಥಿಗಳು ಹಾಗೂ ಹಿರಿಯರ ವಿಭಾಗದಲ್ಲಿ 30 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 90 ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಲ್ಲಿ ಅತೀ ಹೆಚ್ಚು ಕ್ರೀಡಾಪಟುಗಳು ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ನಿಂದ ಪ್ರತಿನಿಧಿಸುತ್ತಿದ್ದಾರೆ. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.
