ಬಂಟರ ಸಂಘ ಕೇಪು ಇದರ ನೂತನ ಸಮಿತಿಯ ಪದಗ್ರಹಣ ಸಮಾರಂಭವು ಇತ್ತೀಚೆಗೆ ವಿಟ್ಲ ಗಾರ್ಡನ್ ಆಡಿಟೋರಿಯಂ ಕರವೀರ ಮೈರದಲ್ಲಿ ನಡೆಯಿತು. ಬೆಳಗ್ಗೆ 10 ಗಂಟೆಗೆ ದೀಪ ಪ್ರಜ್ವಲನೆಯೊಂದಿಗೆ ನೃತ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ 10.45 ರಿಂದ ಪದಗ್ರಹಣ ಮತ್ತು ಸಭಾ ಕಾರ್ಯಕ್ರಮ ಸಂಪನ್ನಗೊಂಡಿತು. ಸಮಾರಂಭದ ಅಧ್ಯಕ್ಷತೆಯನ್ನು ಕೇಪು ಬಂಟರ ಸಂಘದ ಅಧ್ಯಕ್ಷ ಜಗಜೀವನ್ ರಾಮ್ ಶೆಟ್ಟಿ ಬೇಡೆಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಯರಾಮ್ ರೈ ಅವರು ಮಾತನಾಡಿ, ಸಂಘದ ಪದಾಧಿಕಾರಿಗಳು ಸದಾ ಕ್ರಿಯಾಶೀಲರಾಗಿದ್ದಾಗ ಸಂಘದ ಚಟುವಟಿಕೆಗಳು ವೇಗ ಪಡೆದುಕೊಳ್ಳುತ್ತದೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಸಾಧ್ಯ ಎಂದು ನುಡಿದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ಶೆಟ್ಟಿ ವಿಟ್ಲ, ವಿಟ್ಲ ವಲಯ ಬಂಟರ ಸಂಘದ ಗೌರವಾಧ್ಯಕ್ಷ ರಾಧಕೃಷ್ಣ ಶೆಟ್ಟಿ ಚೆಲ್ಲಡ್ಕ, ವಿಟ್ಲ ವಲಯ ಬಂಟರ ಸಂಘದ ಅಧ್ಯಕ್ಷ ರಾಜೀವ ಭಂಡಾರಿ ಕುಂಡಕೋಳಿ, ಕೇಪು ಗ್ರಾಮ ಬಂಟರ ಸಂಘದ ನಿಯೋಜಿತ ಅಧ್ಯಕ್ಷ ತಾರಾನಾಥ ಆಳ್ವ, ಬಂಟ್ವಾಳ ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಶಿವಾನಂದ ರೈ ಕೊಲ್ಯ, ಶ್ರೀಮತಿ ಗೀತಲತಾ ಶೆಟ್ಟಿ, ವಿಟ್ಲ ವಲಯ ಬಂಟರ ಸಂಘದ ಮಹಿಳಾ ಅಧ್ಯಕ್ಷೆ ಶಿವಾಣಿ ಬಿ ಶೆಟ್ಟಿ, ಕೇಪು ಬಂಟರ ಸಂಘದ ಮಹಿಳಾ ಅಧ್ಯಕ್ಷೆ ಸವಿತಾ ಶೆಟ್ಟಿ ಕುಕ್ಕೆಬೆಟ್ಟು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದರು.
ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಸಮಿತಿಯ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು. ಗುರಿಕಾರರಾದ ನಿವಾಸ ರೈ ಕುಂಡಕೋಳಿ ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕೇಪು ಗ್ರಾಮದ ಯುವ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮೈರ ಸನ್ಮಾನ ಪತ್ರ ವಾಚಿಸಿದರು. ಸಂತೋಷ್ ಆಳ್ವ ಚೆಲ್ಲಡ್ಕ ಇವರ ಮಗುವಿನ ಚಿಕಿತ್ಸೆಗಾಗಿ ಹಾಗೂ ಪ್ರೇಮಲತಾ ಕುದ್ದುಪದವು ಇವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ವಿತರಿಸಲಾಯಿತು. ಕಾರ್ಯಕ್ರಮವನ್ನು ಜೊತೆ ಕಾರ್ಯದರ್ಶಿ ಸಂದೀಪ್ ರೈ ಕಲ್ಲಂಗಲ ಪ್ರಾರ್ಥಿಸಿ, ನಿಯೋಜಿತ ಅಧ್ಯಕ್ಷ ತಾರಾನಾಥ ಆಳ್ವ ಕುಕ್ಕೆಬೆಟ್ಟು ಸ್ವಾಗತಿಸಿದರು. ಕೋಶಾಧಿಕಾರಿ ಉದಯಕುಮಾರ್ ರೈ ಕಂಬಳದಡ್ಡ ವಂದಿಸಿದರು. ಸುರೇಶ್ ಶೆಟ್ಟಿ ಪಡಿಬಾಗಿಲು ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸತೀಶ್ ರೈ ಮೈರ ಕಾರ್ಯಕ್ರಮ ಸಂಯೋಜಿಸಿದರು.