ಪ್ರವಾಸೋದ್ಯಮದ ಕುರಿತು ಮಂಡಿಸಿದ ಪ್ರಬಂಧಕ್ಕೆ ಹೇಮಂತ್ ರೈ ಮನವಳಿಕೆಗುತ್ತು ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಅವರು ಮಂಗಳೂರು ವಿಶ್ವವಿದ್ಯಾಲಯದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಭಾಗದ ಪ್ರೊಫೆಸರ್ ಟಿ.ಎನ್ ಶ್ರೀಧರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ISSUE’S AND PROSPECTS OF SUSTAINABLE TOURISM IN WESTERN GHATS – A STUDY OF KODAGU AND UTTARA KANNADA DISTRICTS KARNATAKA ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ.

ಹೇಮಂತ್ ರೈ ಅವರು ಕೇವಲ ಉದ್ಯಮಿಯಾಗಿರದೆ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಧಾರ್ಮಿಕ, ಕ್ರೀಡಾ ಕ್ಷೇತ್ರಗಳಲ್ಲೂ ತನ್ನನ್ನು ತಾನು ತೊಡಗಿಸಿಕೊಂಡವರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಚೆನ್ನೈ ಘಟಕದ ಸಂಚಾಲಕರಾಗಿ, ರಾಷ್ಟ್ರೀಯ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಮಂಗಳೂರು ಇದರ ಚೆನ್ನೈ ಘಟಕದ ಸಂಚಾಲಕರಾಗಿ, ಭಾರತ ಮಾಲ್ಡಿವ್ಸ್ ಟ್ರೇಡ್ ಕೌನ್ಸಿಲ್ ನ ಉಪಾಧ್ಯಕ್ಷರಾಗಿ, ಕಾರವಾರ ರೋಟರಿ ಕ್ಲಬ್ ನ ಅಂತರಾಷ್ಟ್ರೀಯ ನಿರ್ದೇಶಕರಾಗಿ ಸೇವೆ ಸಲ್ಲಿಸಿರುತ್ತಾರೆ. ವಿದ್ಯಾಭ್ಯಾಸ, ಕಲೆ, ಯಕ್ಷಗಾನ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ಹಾಗೂ ಇನ್ನಿತರ ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡ ಇವರ ಸಮಾಜ ಸೇವೆಯನ್ನು ಗುರುತಿಸಿ ಅನೇಕ ಪ್ರಶಸ್ತಿ ಪುರಸ್ಕಾರಗಳು ಲಭಿಸಿದೆ. ಪೆರಾಬೆ ಗ್ರಾಮದ ಮನವಳಿಕೆಗುತ್ತು ನಿವಾಸಿಯಾಗಿರುವ ಹೇಮಂತ್ ರೈ ಅವರು ಆಲಂಕಾರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ, ರಾಮಕುಂಜ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ, ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಬಿಬಿಎಂ ಪದವಿಯನ್ನು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದಲ್ಲಿ ಪ್ರವಾಸೋದ್ಯಮದಲ್ಲಿ ಸ್ನಾತಕೋತರ ಪದವಿ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದುಕೊಂಡಿದ್ದಾರೆ.