ಪ್ರತಿಷ್ಠಿತ ಜಾತೀಯ ಸಂಘ ಸಂಸ್ಥೆಗಳಲ್ಲಿ ಒಂದಾದ ಬಾಂಬೆ ಬಂಟ್ಸ್ ಅಸೋಸಿಯೇಷನ್ ವತಿಯಿಂದ ತವರೂರಿನ ನಾಮಾಂಕಿತ ಕಲಾವಿದರ ಕೂಡುವಿಕೆಯಲ್ಲಿ ‘ಭೃಗು ಶಾಪ’ ಪೌರಾಣಿಕ ಯಕ್ಷಗಾನ ತಾಳಮದ್ದಳೆಯು ಸೆಪ್ಟೆಂಬರ್ 6ರಂದು ಅಪರಾಹ್ನ 3 ರಿಂದ ಜೂಯಿ ನಗರದ ಬಂಟ್ಸ್ ಸೆಂಟರ್ ನಲ್ಲಿ ಜರುಗಲಿದೆ. ಬಾಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆ ಶೆಟ್ಟಿಯವರ ಮುಂದಾಳತ್ವದಲ್ಲಿ ಕಲಾ ಸಂಘಟಕ ಪ್ರಕಾಶ್ ಶೆಟ್ಟಿ ಸುರತ್ಕಲ್ ಅವರ ಕಲಾ ಪ್ರಕಾಶ ಪ್ರತಿಷ್ಠಾನ ಮುಂಬೈ ಇದರ ಸಂಯೋಜನೆಯಲ್ಲಿ ಅಸೋಸಿಯೇಷನ್ ನ ಪದಾಧಿಕಾರಿಗಳು, ಸದಸ್ಯರ ಸಹಕಾರದೊಂದಿಗೆ ನಡೆಯಲಿರುವ ತಾಳಮದ್ದಳೆಯಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ್ ಕನ್ಯಾಡಿ, ಮದ್ದಲೆಯಲ್ಲಿ ಮಧುಸೂದನ್ ಪಾಲನ್, ಚೆಂಡೆಯಲ್ಲಿ ಆಶಿಶ್ ಆರ್ ದೇವಾಡಿಗ, ಕಲಾವಿದರಾಗಿ ಜಬ್ಬಾರ್ ಸಮೋ ಸಂಪಾಜೆ, ಪ್ರೊ. ಪವನ್ ಕಿರಣ್ ಕೆರೆ, ಗಣೇಶ್ ಶೆಟ್ಟಿ ಕನ್ನಡಿಕಟ್ಟೆ, ಸುರೇಶ್ ಶೆಟ್ಟಿ ನಂದ್ರೊಳ್ಳಿ, ಡಾ| ಮಹೇಶ್ ಸಾಣೂರು ಅವರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸದಸ್ಯರು, ಸಮಾಜ ಬಾಂಧವರು, ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಬಾಂಬೆ ಅಸೋಸಿಯೇಷನ್ ಅಧ್ಯಕ್ಷ ನ್ಯಾಯವಾದಿ ಡಿ.ಕೆ ಶೆಟ್ಟಿ, ಉಪಾಧ್ಯಕ್ಷ ಕಿಶೋರ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಶೇಖರ್ ಆರ್ ಶೆಟ್ಟಿ, ಕೋಶಾಧಿಕಾರಿ ಸಿಎ ವಿಶ್ವನಾಥ್ ಎಸ್ ಶೆಟ್ಟಿ, ಶೈಕ್ಷಣಿಕ ಸಮಿತಿಯ ಕಾರ್ಯಾಧ್ಯಕ್ಷ ಶ್ರೀಧರ ಕೆ ಶೆಟ್ಟಿ, ಜೊತೆ ಕಾರ್ಯದರ್ಶಿ ಜಯರಾಜ್ ರೈ, ದಿವಾಕರ್ ಕೆ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ, ಮಹಿಳಾ ಕಾರ್ಯಾಧ್ಯಕ್ಷೆ ಶಾಂತಾ ಎನ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಪ್ರತಿಕ್ ಪಿ ಶೆಟ್ಟಿ, ಟ್ರಸ್ಟಿಗಳು, ಮಾಜಿ ಅಧ್ಯಕ್ಷರು, ಉಪ ಸಮಿತಿಗಳ ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.