ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಕಡಬ ತಾಲೂಕು ಘಟಕ ರಚನೆಯಾಗಿದ್ದು, ಗೌರವಾಧ್ಯಕ್ಷರಾಗಿ ಗೋಪಾಲಕೃಷ್ಣ ಪಡ್ಡಿಲ್ಲಾಯ, ಅಧ್ಯಕ್ಷರಾಗಿ ದಯಾನಂದ ರೈ ಮನವಳಿಕೆ ಗುತ್ತು, ಪ್ರಧಾನ ಸಂಚಾಲಕರಾಗಿ ಡಾ| ಹೇಮಂತ್ ರೈ ಮನವಳಿಕೆ ಗುತ್ತು ಆಯ್ಕೆಯಾಗಿದ್ದಾರೆ. ಸೆಪ್ಟೆಂಬರ್ 5 ರಂದು ಅಲಂಕಾರಿನ ದುರ್ಗಾಂಬ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಪಟ್ಲ ಫೌಂಡೇಶನ್ ನ ಅಭಿಮಾನಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿಗಳಾಗಿ ಎಸ್ವಿ ಪ್ರಸಾದ್ ಕಣಿಪುರ, ಜೊತೆ ಕಾರ್ಯದರ್ಶಿಯಾಗಿ ಜನಾರ್ದನ ಗೌಡ ಕಯ್ಯಪೆ, ಕೋಶಾಧಿಕಾರಿಯಾಗಿ ಶ್ರೀಮತಿ ಮಮತಾ ಅಂಬರಾಜೆ, ಉಪಾಧ್ಯಕ್ಷರಾಗಿ ವಿಟ್ಟಲ್ ರೈ ಕೊಣಾಲು ಗುತ್ತು, ಶ್ರೀಮತಿ ಬೇಬಿ ಪಾಟಾಲಿ, ಗೌರವ ಸಲಹೆಗಾರರಾಗಿ ಸುಬ್ರಹ್ಮಣ್ಯ ರಾವ್ ನಗ್ರಿ, ರಮೇಶ್ ಭಟ್ ಉಪ್ಪಂಗಳ, ಈಶ್ವರ ಗೌಡ ಪಜ್ಜಡ್ಕ, ರಾಧಾಕೃಷ್ಣ ರೈ ಪರಾರಿ ಗುತ್ತು, ಗೋಪಾಲ ಕಡಬ, ಮುತ್ತಪ್ಪ ಪೂಜಾರಿ ನೆಯ್ಯಲ್ಗ ಆಯ್ಕೆಯಾಗಿದ್ದಾರೆ.

ಕಡಬ ತಾಲೂಕು ಘಟಕದ ಪದಗ್ರಹಣ ಸಮಾರಂಭವು ನವರಾತ್ರಿಯ ಸುಸಂದರ್ಭದಲ್ಲಿ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಿಯ ದಿವ್ಯ ಸನ್ನಿಧಿಯಲ್ಲಿ ಪಟ್ಲ ಸತೀಶ್ ಶೆಟ್ಟಿಯವರ ಹಾಗೂ ಕೇಂದ್ರ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆಯಲಿದೆ.