ಕಳೆದ 25 ವರ್ಷಗಳಿಂದ ಕಾವೇಶ್ವರ ದೇವಸ್ಥಾನ ಮತ್ತು ಪರಿವಾರ ದೈವಗಳ ದೈವಸ್ಥಾನ ಇದರ ಅಭಿವೃದ್ಧಿಗೆ ಊರ, ಪರ ಊರ ಸಮಸ್ತ ಜನರ ಸಹಕಾರ ಪಡೆದು ನಿರಂತರ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿ ಇದೀಗ ಕಾವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ರಘು ಎಲ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ನಮ್ಮೆಲ್ಲರ ಮಾರ್ಗದರ್ಶಕರು ಆದ ಗೌರವಾನ್ವಿತ ರಘು ಎಲ್ ಶೆಟ್ಟಿಯವರ ಮುಂದಿನ ಅವಧಿಯಲ್ಲಿ ಇನ್ನಷ್ಟು ಧಾರ್ಮಿಕ, ಶೈಕ್ಷಣಿಕ ಕೆಲಸ ಕಾರ್ಯಗಳನ್ನು ಮಾಡುವ ಶಕ್ತಿ, ಸಾಮರ್ಥ್ಯ ಮತ್ತು ಆರೋಗ್ಯವನ್ನು ಶ್ರೀ ಕಾವೇಶ್ವರ ದೇವರು ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇವೆ.
