ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ನೂತನ ಪ್ರೌಢಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ರೂಪಾಯಿ 1 ಲಕ್ಷ 50 ಸಾವಿರ ಅನುದಾನ ಮಂಜೂರಾಗಿದ್ದು, ಅದರ ಆದೇಶ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಬಜಪೆ ವಲಯ ಯೋಜನಾಧಿಕಾರಿ ಗಿರೀಶ್ ಅವರು ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿಯವರಿಗೆ ಹಸ್ತಾಂತರ ಮಾಡಿದರು. ಈ ಸಂಧರ್ಭದಲ್ಲಿ ಟ್ರಸ್ಟ್ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್, ಕೋಶಾಧಿಕಾರಿ ವಿಠಲ ಶೆಟ್ಟಿ, ಸದಸ್ಯರಾದ ವಜ್ರಾಕ್ಷಿ ಪಿ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪ್ರಪುಲ್ಲ ಪಂಜ, ಉಪಾಧ್ಯಕ್ಷ ಅನಿಲ್ ಸಾಲ್ಯಾನ್, ಸದಸ್ಯೆ ಕಾವ್ಯ, ಗ್ರಾಮಾಭಿವೃದ್ದಿ ಯೋಜನೆ ಮೇಲ್ವಿಚಾರಕಿ ನಿಶ್ಮಿತಾ ಸುರೇಶ್ ಶೆಟ್ಟಿ, ಸೇವಾ ಪ್ರತಿನಿಧಿ ಯಶೋದ ಬಾಲಕೃಷ್ಣ ಮುಂತಾದವರು ಉಪಸ್ಥಿತರಿದ್ದರು.
