ಗಣಿತನಗರ: ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಉಡುಪಿಯ ವಿ-ರೀಚ್ ಅಕಾಡೆಮಿಯ ಮುಖ್ಯಸ್ಥ ಸಿ.ಎಸ್ ಸಂತೋಷ್ ಪ್ರಭು ಇವರಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಜರುಗಿತು. ಪ್ರಸ್ತುತ ವಾಣಿಜ್ಯ ಕ್ಷೇತ್ರದಲ್ಲಿ ಇರುವ ವಿಪುಲ ಅವಕಾಶಗಳ ಬಗ್ಗೆ ತಿಳಿಸುತ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿಕೊಟ್ಟರು. ಇದೇ ಸಂದರ್ಭ ಕಾಲೇಜಿನ ಉಪಪ್ರಾಂಶುಪಾಲ ಶ್ರೀ ಸಾಹಿತ್ಯ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀ ಶೈಲೇಶ್ ಉಪಸ್ಥಿತರಿದ್ದರು.
