ನಿಟ್ಟೆ : ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ವಿದ್ಯಾರ್ಥಿಗಳು ನಿಟ್ಟೆಯ ಪರ್ಪಲೆಯಲ್ಲಿರುವ ಕ್ರಿಸ್ತ ಸೇವಕೀ ಆಶ್ರಮವನ್ನು ಸಂದರ್ಶಿಸಿದರು. ಅಲ್ಲಿನ ನಿವಾಸಿಗಳಿಗೆ ಆಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟು ಸುಮಾರು ಎರಡು ಗಂಟೆಗೂ ಹೆಚ್ಚು ಹೊತ್ತು ಬೆರೆತರು. ಇದೇ ಸಂದರ್ಭ ಆಶ್ರಮದ ನಿವಾಸಿಗಳಿಗೆ ವಿದ್ಯಾರ್ಥಿಗಳು ತಂದ ದಿನಸಿ ಸಾಮಾಗ್ರಿಗಳನ್ನು ಹಂಚಿ ಖುಷಿಪಟ್ಟರು. ಇದೇ ಸಂದರ್ಭ ಸಂಸ್ಥೆಯ ಉಪಪ್ರಾಂಶುಪಾಲ ಶ್ರೀ ಸಾಹಿತ್ಯ, ಘಟಕಾಧಿಕಾರಿ, ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀ ಶೈಲೇಶ್, ಕನ್ನಡ ಉಪನ್ಯಾಸಕ ಸಂತೋಷ್ ನೆಲ್ಲಿಕಾರು ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಕೀರ್ತಿ ಆಚಾರ್ಯ, ಹಿಂದಿ ಉಪನ್ಯಾಸಕಿ ಶ್ರೀಮತಿ ಅಶ್ವಿನಿ, ಕ್ಷೇಮಪಾಲಕರಾದ ಸುಕೇಶ್, ಮಂಜುನಾಥ್, ಚಾಲಕರಾದ ಚಂದ್ರಶೇಖರ್ ಮತ್ತು ಅಕ್ಷಯ್ ಕುಮಾರ್ ಉಪಸ್ಥಿತರಿದ್ದರು.
