ನಾಡಿನೆಲ್ಲೆಡೆ ವಿಜಯ ದಶಮಿಯ ಸಂಭ್ರಮ ಕಳೆಗಟ್ಟಿರುವ ಸಂದರ್ಭದಲ್ಲಿ, ಅಕ್ಟೋಬರ್ 2ರಂದು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಾರದ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾ ನಗರ, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ನ ವಿದ್ಯಾರ್ಥಿಗಳು ಭಕ್ತಿ ಸುಧೆಯ ಗೀತ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಮನೋವೈದ್ಯರಾದ ಡಾ.ವಿರೂಪಾಕ್ಷ ದೇವರಮನೆ, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ರವಿ ಜಿ, ಹೇಮಂತ್ , ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ ಉಪಸ್ಥಿತರಿದ್ದರು. ಮಣಿಪಾಲ ಜ್ಞಾನಸುಧಾ ಮತ್ತು ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಸಂಭ್ರಮದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಆಂಗ್ಲ ಭಾಷೆ ಉಪನ್ಯಾಸಕಿ ಶ್ರೀಮತಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.
