ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ಇದರ ಜಿಲ್ಲಾ ಕಚೇರಿಯ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭ ಹಾಗೂ ಕಾರ್ಯಕರ್ತರ ಸಮಾವೇಶವು ಅಕ್ಟೋಬರ್ 03 ರಂದು ನಡೆಯಿತು. ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್ ಸಂತೋಷ್ ಅವರು ಕಟ್ಟಡ ಶಿಲಾನ್ಯಾಸ ನೆರವೇರಿಸಿದರು. ಆ ನಂತರ ಕಾರ್ಯಕರ್ತರ ಸಮಾವೇಶ ನಡೆಯಿತು.

ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆ ಹಾಗೂ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.