ಪ್ರಸಿದ್ಧ ಉದ್ಯಮಿ, ಸಮಾಜಸೇವಕ ಶಶಿಧರ್ ಶೆಟ್ಟಿ ಬರೋಡ ಅವರ ಮಾತೃಶ್ರೀ ಕಾಶಿ ಶೆಟ್ಟಿ ಅವರು ಇಂದು ಸ್ವಗೃಹದಲ್ಲಿ ನಿಧನರಾದರು. ಇವರು ಮಕ್ಕಳಾದ ಶ್ರೀನಿವಾಸ ಶೆಟ್ಟಿ, ಜಯರಾಮ ಶೆಟ್ಟಿ, ಶಶಿಧರ ಶೆಟ್ಟಿ, ಪ್ರಶಾಂತ ಶೆಟ್ಟಿ, ಹರೀಶ್ ಶೆಟ್ಟಿ, ರಾಜೇಶ್ ಶೆಟ್ಟಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಾಶಿ ಶೆಟ್ಟಿ ಅವರ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ ಶೆಟ್ಟಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಬಂಟ್ಸ್ ನೌ ಸ್ಥಾಪಕ ರಂಜಿತ್ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.