ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ತೃತೀಯ ವಾರ್ಷಿಕೋತ್ಸವ ಸಮಾರಂಭ ಅಕ್ಟೋಬರ್ 18 ಶನಿವಾರ ಸಂಜೆ 4 ಗಂಟೆಗೆ ಸುರತ್ಕಲ್ ಬಂಟರ ಭವನದ ವಠಾರದಲ್ಲಿ ನಡೆಯಲಿದೆ. ಸುರತ್ಕಲ್ ಗೋವಿಂದದಾಸ ಕಾಲೇಜ್ ನ ಆಡಳಿತಾತ್ಮಕ ನಿರ್ದೇಶಕರಾದ ರಮೇಶ್ ಭಟ್ ಎಸ್ ಜಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಿಡಬ್ಯೂಡಿ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಜೇಶ್ ರೈ, ಉದ್ಯಮಿ ಸಮಾಜ ಸೇವಕ ಸತೀಶ್ ಮುಂಚೂರು, ದ.ಕ ಜಿಲ್ಲಾ ಬಿಜೆಪಿ ವಕ್ತಾರ ರಾಜ್ ಗೋಪಾಲ್ ರೈ, ದ.ಕ ಹೋಟೆಲ್ ಅಸೋಸಿಯೇಷನ್ ನ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ವಾಮಂಜೂರು ಶ್ರೀ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ಶೆಟ್ಟಿ ಲಿಂಗಮಾರುಗುತ್ತು, ಶ್ರೀಮತಿ ಸೀಮಾ ಶೆಟ್ಟಿ ಸುಭಾಷಿತನಗರ, ಶ್ರೀಮತಿ ಮಮತ ಪ್ರೇಮನಾಥ್ ಹೆಗ್ಡೆ ಭಾಗವಹಿಸಲಿದ್ದಾರೆ.

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಯಕ್ಷಗುರು ರಾಕೇಶ್ ರೈ ಅಡ್ಕ, ಸುರತ್ಕಲ್ ಬಂಟರ ಸಂಘದ ಮಾಜಿ ಅಧ್ಯಕ್ಷ ಸುಧಾಕರ ಎಸ್ ಪೂಂಜ ಉಪಸ್ಥಿತರಿರುವರು. ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ 90 ಶೇಕಡಾ ಅಂಕ ಗಳಿಸಿದ ಯಕ್ಷಸಿರಿಯ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಅಭಿನಂದಿಸಲಾಗುವುದು. ಬಳಿಕ ಯಕ್ಷಸಿರಿಯ ವಿದ್ಯಾರ್ಥಿಗಳ ಮತ್ತು ಇತರ ಕಲಾವಿದರ ಕೂಡುವಿಕೆಯಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ತಿಳಿಸಿದ್ದಾರೆ.