ಪರಿಸರ ಸ್ವಚ್ಛವಾಗಿದ್ದರೆ ಊರಿನ ಸುಂದರತೆ ಜತೆಗೆ ಸಾಂಕ್ರಾಮಿಕ ರೋಗಗಳು ದೂರವಾಗಿ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ. ಹಾಗಾಗಿ ಸ್ವಚ್ಛತೆ ಕಾಪಾಡಲು ಸಹಕರಿಸುವುದು ನಾಗರೀಕರ ಜವಾಬ್ದಾರಿಯಾಗಿದೆ ಎಂದು ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು. ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ರೋಶನಿ ನಿಲಯ ಕಾಲೇಜಿನ ಎನ್.ಎಸ್.ಎಸ್ ಘಟಕ ಮತ್ತು ಗ್ಲೋಬಲ್ ಇಕೋ ಗ್ರೀನ್ ಫೌಂಡೇಶನ್ ಸಹಭಾಗಿತ್ವದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ ರೈ ಕಟ್ಟ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ ಹರೀಶ್ ರೈ, ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ರೋಟರಿ ಪದಾಧಿಕಾರಿ ಜಾಕ್ಸನ್ ಅತಿಥಿಗಳಾಗಿ ಭಾಗವಹಿಸಿದ್ದರು. ನಗರದ ತಾಲೂಕು ಪಂಚಾಯತ್ ಕಚೇರಿಯಿಂದ ರೈಲು ನಿಲ್ದಾಣದವರೆಗಿನ ರಸ್ತೆ ಬದಿಯನ್ನು ರೋಶನಿ ನಿಲಯ ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಸ್ವಚ್ಛಗೊಳಿಸಿದರು.