ವಿದ್ಯಾರಣ್ಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಪ್ರಕೃತಿ ಪಿ ಶೆಟ್ಟಿ ರಾಜ್ಯ ಮಟ್ಟದ ಚದುರಂಗ ಸ್ಪರ್ಧೆಯ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ (SGFI) ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ವಿಜೇತ ವಿದ್ಯಾರ್ಥಿನಿಯು ಶ್ರೀಯುತ ಪ್ರಕಾಶ್ ಶೆಟ್ಟಿ ಮತ್ತು ಶ್ರೀಮತಿ ಸಂಗೀತಾ ಪಿ ಶೆಟ್ಟಿ ದಂಪತಿಯರ ಪುತ್ರಿ. ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಯಾದಗಿರಿ ಜಿಲ್ಲೆ ಶಹಾಪುರದ ದಿಗ್ಗಿ ರೋಡ್ ಸರಕಾರಿ ಮಾದರಿ ಪದವಿ ಪೂರ್ವ ಕಾಲೇಜು ದಿಗ್ಗಿ ರೋಡ್ ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ (ನ.4 ಮತ್ತು ನ.5) ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್ ಕೆ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಕುಮಾರಿ ಕಾವ್ಯ ಶೆಟ್ಟಿ ತಂಡ ವ್ಯವಸ್ಥಾಪಕರಾಗಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.





































































































