ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಗ್ರಾಮೀಣ ಪ್ರದೇಶದ ಅತ್ಯುನ್ನತ ಶಿಕ್ಷಣ ಸಂಸ್ಥೆಯಾಗಿ ಸಮಾಜದಲ್ಲಿ ಗುರುತಿಸಿಕೊಂಡ ಹೆಗ್ಗಳಿಕೆಯ ಸಂಸ್ಥೆಯಾಗಿದೆ. ವಿದ್ಯಾರ್ಥಿಗಳ ಜೀವನದ ಆಶಾಕಿರಣವಾಗಿ ಈಡೀ ರಾಜ್ಯವೇ ಹೆಮ್ಮೆಯಿಂದ ಗುರುತಿಸಿಕೊಂಡ ವಿದ್ಯಾಸಂಸ್ಥೆಯಾಗಿದೆ. ಕೇವಲ ಶಿಕ್ಷಣ ಮಾತ್ರವಲ್ಲದೆ ಸಾಂಸ್ಕೃತಿಕ, ಸಾಹಿತ್ಯ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಈಡೀ ರಾಷ್ಟವೇ ಗುರುತಿಸುವಂತಹ ಅದ್ಭುತ ಸಾಧನೆಯನ್ನು ಗಳಿಸಿದ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿದೆ. ದಿನಾಂಕ ೦೭-೧೧-೨೦೨೫ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಜನತಾ ಪದವಿ ಪೂರ್ವ ಕಾಲೇಜು, ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಕ್ಸಿಂಗ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಕುಂದಾಪುರದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಯಶ್ಚಿತ್ ಎಸ್ ಶೆಟ್ಟಿ ವಿಜಯಶಾಲಿಯಾಗುವುದರ ಮೂಲಕ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಮೊದಲು ಹಲವಾರು ಕ್ರೀಡೆಗಳಾದ ಪುಟ್ಬಾಲ್, ವಾಲಿಬಾಲ್, ಥ್ರೋಬಾಲ್, ಕರಾಟೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುವುದು ಎಕ್ಸಲೆಂಟ್ನ ಸಾಧನೆ. ಈ ಸಾಧನೆಯ ಜೊತೆಗೆ ಬಾಕ್ಸಿಂಗ್ ಪಂದ್ಯದಲ್ಲಿಯೂ ರಾಜ್ಯಕ್ಕೆ ಆಯ್ಕೆಯಾಗಿರುವುದು ಎಕ್ಸಲೆಂಟ್ನ ಇನ್ನೊಂದು ಮಹೋನ್ನತ ಸಾಧನೆಯಾಗಿದೆ. ಈ ವಿದ್ಯಾರ್ಥಿಯ ಈ ಅಮೋಘ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.












































































































