ಉಡುಪಿ ಜಿಲ್ಲಾ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ತಾಲೂಕು ಪಂಚಾಯತ್ ಸದಸ್ಯ, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಶ್ರೀ ಎನ್ ರಮೇಶ್ ಶೆಟ್ಟಿ ಹಾವಂಜೆಯವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ) ಬೆಂಗಳೂರು ಇವರ ವತಿಯಿಂದ ಸಹಕಾರ ಕ್ಷೇತ್ರದಲ್ಲಿ ಸಾಧನೆಗಾಗಿ 2025 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.









































































































