ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಜತಾದ್ರಿ, ಮಣಿಪಾಲ ಹಾಗೂ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ (ರಿ.) ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಹಳೆ-2025ರಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಪ್ರಜ್ಞಾಮೋಹನ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು, ಜನಪದ ಗೀತಾ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿಯ ಜಿ. ಅಭಿಜ್ಞಾ ಹೆಗ್ಡೆ ಪ್ರಥಮ ಸ್ಥಾನವನ್ನು, ಇಂಗ್ಲಿಷ್ ಚರ್ಚಾಸ್ಪರ್ಧೆಯಲ್ಲಿ ಪ್ರಥಮ ಪಿಯುಸಿಯ ಸಾನಿಕ ಅಮಿತ್ ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿಯ ನಾಗಶಯನ ಜಿ.ವಿ ಹಾಗೂ ಸುಬ್ರಮಣ್ಯ ಶೆಣೈ ತೃತೀಯ ಸ್ಥಾನವನ್ನು ದಕ್ಕಿಸಿಕೊಂಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ, ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.









































































































