ಬ್ಯಾಡ್ಮಿಂಟನ್ ಆಟಗಾರ ಕಾರ್ಕಳದ ಆಯುಷ್ ಶೆಟ್ಟಿಗೆ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿಯಿಂದ ಕೊಡ ಮಾಡುವ ಇಂಡಿಯಾ ಸ್ಪೋರ್ಟ್ಸ್ ಅವಾರ್ಡ್- 2025 ವರ್ಷದ ಉದಯೋನ್ಮುಖ ಕ್ರೀಡಾಪಟು ಪ್ರಶಸ್ತಿ ಲಭಿಸಿದೆ. ನವೆಂಬರ್ 21ರಂದು ದೆಹಲಿಯ ಎಫ್.ಐ.ಸಿ.ಸಿ.ಐ ಫೆಡರೇಶನ್ ಹೌಸ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಆಯುಷ್ ಶೆಟ್ಟಿ ಸಾಣೂರಿನ ಮಿತ್ತಲ ಮನೆಯ ರಾಮಪ್ರಕಾಶ್ ಶೆಟ್ಟಿ ಮತ್ತು ಶಾಲ್ಮಿಲಿ ದಂಪತಿಯವರ ಪುತ್ರ. ತಮ್ಮ ಎಂಟನೇ ವಯಸ್ಸಿನಲ್ಲಿ ಬ್ಯಾಡ್ಮಿಂಟನ್ ಆಡಲು ಆರಂಭಿಸಿದ್ದರು. ಆರಂಭದಲ್ಲಿ ಕಾರ್ಕಳ ಮತ್ತು ಮಂಗಳೂರಿನಲ್ಲಿ ತರಬೇತಿ ಪಡೆದಿದ್ದರು. ನಂತರ ಆಯುಷ್ ಶೆಟ್ಟಿ ಕುಟುಂಬ ಬೆಂಗಳೂರಿಗೆ ಶಿಫ್ಟ್ ಆದರು. ಯುಎಸ್ ಓಪನ್ ಬಿಡಬ್ಲ್ಯೂಎಫ್ ಸೂಪರ್ 300 ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಆಯುಷ್ ಮೊದಲ ಬಿಡಬ್ಲ್ಯೂಎಫ್ ಟೂರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. 2025ರಲ್ಲಿ ಭಾರತಕ್ಕೆ ಸಿಕ್ಕಿದ ಮೊದಲ ಬಿಡಬ್ಲ್ಯೂಎಫ್ ಪ್ರಶಸ್ತಿ ಇದಾಗಿದೆ.









































































































