ಸಮಾಜಸೇವಕ ಹಾಗೂ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) ಯ ಮಾಜಿ ಅಧ್ಯಕ್ಷ ವಿಶ್ವನಾಥ ಯು ಮಾಡ ಅವರು ನವೆಂಬರ್ 19 ರಂದು ನಿಧನರಾಗಿದ್ದು, ಕರಾವಳಿ ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ 25 ವರ್ಷಗಳಿಂದ ಕ್ರಿಯಾಶೀಲವಾಗಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ, ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್, ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್, ಗೌರವ ಕೋಶಾಧಿಕಾರಿ ಸದಾನಂದ ಆಚಾರ್ಯ, ಉಪಾಧ್ಯಕ್ಷರುಗಳು, ಸಲಹೆಗಾರರು, ಇತರ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು, ಸಾಗರೋತ್ತರ ಸಮಿತಿಯ ಉಪಾಧ್ಯಕ್ಷರು, ಜಿಲ್ಲಾ ಕಾರ್ಯಧ್ಯಕ್ಷರು, ರಾಜ್ಯ ಸಂಯೋಜಕರು ಮತ್ತು ಕೇಂದ್ರ ಹಾಗೂ ಜಿಲ್ಲಾ ಸಮಿತಿಯ ಎಲ್ಲಾ ಸದಸ್ಯರುಗಳು ಗಾಢ ಸಂತಾಪ ಸೂಚಿಸಿದ್ದಾರೆ.

ವಿಶ್ವನಾಥ ಮಾಡ ಅವರು ಶಿಸ್ತಿನ, ಸರಳತೆ ಹಾಗೂ ನಿಸ್ವಾರ್ಥ ಸಮಾಜಸೇವೆಯಿಂದ ಸಮುದಾಯದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಅವರ ನಾಯಕತ್ವ, ಮಾರ್ಗದರ್ಶನ ಮತ್ತು ಸೇವಾಭಾವ ಸಂಘಟನೆಯನ್ನು ಸದಾ ಪ್ರೇರೇಪಿಸುತ್ತಿತ್ತು. ಅವರ ಕುಟುಂಬಕ್ಕೆ ದುಃಖವನ್ನು ತಾಳುವ ಶಕ್ತಿ ದೊರಕಲೆಂದು ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರ ಸೇವೆಯನ್ನು ಸ್ಮರಿಸಿ ಸಂತಾಪ ಸೂಚಿಸಿದ್ದಾರೆ.









































































































