ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29 ನೇ ವಾರ್ಷಿಕ ಮಹಾಸಭೆ, ಬಹಿರಂಗ ಅಧಿವೇಶನ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಯುಎಇ ಬಂಟ್ಸ್ ನ ನೂತನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಂಗಳವಾರ ನಡೆದ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಯುಎಇ ಅಧ್ಯಕ್ಷರಾದ ವಕ್ವಾಡಿ ಪ್ರವೀಣ್ ಶೆಟ್ಟಿ ಮಾತಾಡಿ, “ನಾನು ಬಂಟರ ಸಂಘಕ್ಕೆ ಬರಲು ಐಕಳ ಹರೀಶ್ ಶೆಟ್ಟಿ ಅವರೇ ಕಾರಣ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳಿಗೆ ಅಭಿನಂದನೆಗಳು. ಹೊಸ ತಂಡ ಉತ್ಸಾಹದಿಂದ ಕಾರ್ಯ ನಿರ್ವಹಿಸುವ ಮೂಲಕ ಇಲ್ಲಿ ನಿರ್ಮಾಣ ಆಗಬೇಕಿರುವ ನೂತನ ಕಟ್ಟಡಕ್ಕೆ ಎಲ್ಲರೂ ಧನಸಹಾಯ ನೀಡಬೇಕು” ಎಂದರು.
ವೇದಿಕೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಅಶೋಕ್ ಶೆಟ್ಟಿ ಬಿಲ್ಲಾಡಿ, ಉಮಾ ಕೃಷ್ಣ ಶೆಟ್ಟಿ, ಶಶಿಧರ್ ಶೆಟ್ಟಿ ಇನ್ನಂಜೆ, ಅಜಿತ್ ಹೆಗ್ಡೆ ಪುಣೆ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಮೋಹನ್ ದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಶೆಟ್ಟಿ ರಂಗೋಲಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಗಿರೀಶ್ ಶೆಟ್ಟಿ ತೆಳ್ಳಾರ್, ಪೃಥ್ವಿರಾಜ್ ರೈ, ಎಸಿ ಭಂಡಾರಿ, ಸುಧಾಕರ್ ಎಸ್ ಪೂಂಜಾ, ಮಂಜುನಾಥ ಶೆಟ್ಟಿ ಕೊಡ್ಲಾಡಿ, ಆನಂದ್ ಶೆಟ್ಟಿ ಎಕ್ಕಾರ್, ನಾಗೇಶ್ ಶೆಟ್ಟಿ, ಅನಿಲ್ ಶೆಟ್ಟಿ, ರಾಜೀವ್ ಭಂಡಾರಿ, ಒಕ್ಕೂಟದ ಸಂಚಾಲಕ ಬಾಲಕೃಷ್ಣ ರೈ ಕೊಲ್ಲಾಡಿ ಮತ್ತಿತರರು ಉಪಸ್ಥಿತರಿದ್ದರು. ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಪ್ರಾಸ್ತಾವಿಕ ಮಾತನ್ನಾಡಿದರು. ನಿತೇಶ್ ಶೆಟ್ಟಿ ಎಕ್ಕಾರ್, ಪ್ರಿಯಾ ಹರೀಶ್ ಶೆಟ್ಟಿ, ರಾಜೇಶ್ವರಿ ಡಿ ಶೆಟ್ಟಿ ಸುರತ್ಕಲ್ ಕಾರ್ಯಕ್ರಮ ನಿರೂಪಿಸಿದರು.

ವರದಿ : ವಿಜಯ್ ಶೆಟ್ಟಿ ದುಬೈ









































































































