ಬಂಟರ ಸಂಘ ಪಡುಬಿದ್ರಿಯ ಅಧ್ಯಕ್ಷರಾಗಿ ಮೂರನೇ ಅವಧಿಗೆ ಡಾ| ದೇವಿ ಪ್ರಸಾದ್ ಶೆಟ್ಟಿ ಬೆಳಪು ಪುನರಾಯ್ಕೆಗೊಂಡಿದ್ದಾರೆ. ಸಂಘದ ಅಧ್ಯಕ್ಷರಾಗಿ ಈ ಹಿಂದಿನ ಅವಧಿಗಳಲ್ಲಿ ಇವರು ಸಂಘದ ಸಭಾಭವನಗಳಿಗೆ ಹವಾ ನಿಯಂತ್ರಿತ ವ್ಯವಸ್ಥೆ, ಸಿರಿಮುಡಿ ಕೋ ಆಪರೇಟಿವ್ ಸೊಸೈಟಿ ಮುಂತಾದ ಯೋಜನೆಗಳನ್ನು ಜಾರಿಗೊಳಿಸಿದ್ದರು. ಈ ಅವಧಿಯಲ್ಲಿ ಸಂಘದ 15 ಕೋಟಿಗಳ ಮಹತ್ವಾಕಾಂಕ್ಷೆಯ ಬಂಟಾಶ್ರಯ ಯೋಜನೆಗೆ ಮುಂದಿನ ತಿಂಗಳಿನಲ್ಲಿ ಭೂಮಿ ಪೂಜೆ ನಡೆಸುವುದಾಗಿ ಅವರು ತಿಳಿಸಿದ್ದಾರೆ. ಡಾ| ಶೆಟ್ಟಿ ಅವರು ರಾಜಕೀಯ, ಸಹಕಾರಿ, ಕಂಬಳ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ.


ನೂತನ ಉಪಾಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪಲ್ಲವಿ, ಶ್ರೀನಾಥ ಹೆಗ್ಡೆ ನಡ್ಸಾಲು ಗುತ್ತು, ಅನಿತ ವಿಶುಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿಯಾಗಿ ರವಿ ಶೆಟ್ಟಿ ಗುಂಡ್ಲಾಡಿ, ಜೊತೆ ಕಾರ್ಯದರ್ಶಿಯಾಗಿ ಕರುಣಾಕರ ಶೆಟ್ಟಿ ಪಲಿಮಾರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ನವೀನ್ ಎನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ವಿವಿಧ ಉಪ ಸಮಿತಿಗಳನ್ನು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.













































































































