ಬ್ರಹ್ಮಾವರ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಡಿಸೆಂಬರ್ ೧೨ ರಂದು ಚಿಣ್ಣರ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ರಾಷ್ಟçಮಟ್ಟದ ಚೆಸ್ ಆಟಗಾರ ಪೂರ್ಣೇಶ್ರವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಜಿ ಎಮ್ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಕ್ರೀಡಾಕ್ಷೇತ್ರದಲ್ಲಿ ಅಮೋಘ ಸಾಧನೆಯನ್ನು ಮಾಡಿರುತ್ತಾರೆ. ಪೋಷಕರು ತಮ್ಮ ಮಕ್ಕಳು ಯಾವುದಾದರೂ ಒಂದು ಕ್ರೀಡೆಯಲ್ಲಿ ಸಾಧನೆ ಮಾಡುವಂತೆ ಪ್ರೋತ್ಸಾಹಿಸಬೇಕೆ0ದು ಕರೆ ನೀಡಿದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಎಲ್ಲಾ ಪುಟಾಣಿ ಮಕ್ಕಳಿಗೆ ಶುಭಹಾರೈಸಿ ಮಾತನಾಡಿ ಪೋಷಕರು ಚಿಕ್ಕ ಮಕ್ಕಳ ಶಾಲಾ ಚಟುವಟಿಕೆಗಳನ್ನು ವೀಕ್ಷಿಸಲು, ಪ್ರೋತ್ಸಾಹಿಸಲು ಎಲ್ಲಾ ಕಾರ್ಯಕ್ರಮಗಳಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸುತ್ತಾರೆ ಆದರೆ ಅದೇ ಮಕ್ಕಳು ದೊಡ್ಡವರಾದಾಗ ಪೋಷಕರು ಮೊದಲಿನ ಆಸಕ್ತಿಯನ್ನು ತೋರಿಸುವುದಿಲ್ಲ. ವಿದ್ಯಾರ್ಥಿಗಳ ಜೀವನದಲ್ಲಿ ಅಂಕಗಳ ಜೊತೆಗೆ ಕ್ರೀಡೆ ಕೂಡ ತುಂಬಾ ಮುಖ್ಯ. ಜಿ ಎಮ್ ಸಂಸ್ಥೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವಾರು ಚಟುವಟಿಕೆಗಳನ್ನು ಆಯೋಜಿಸಿಕೊಂಡು ಬರುತ್ತಿದೆ, ಇದಕ್ಕೆ ಪೋಷಕರು ನಿರಂತರ ಪ್ರೋತ್ಸಾಹಿಸಬೇಕೆಂದರು.
ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಶಾಲಾ ಧ್ವಜವನ್ನು ಅರಳಿಸಿ ಮಾತನಾಡಿ ಕ್ರೀಡೆಗಳಿಂದ ಸಾಮಾಜಿಕ, ನೈತಿಕ ಮೌಲ್ಯಗಳ ಕಲಿಕೆಯಾಗುತ್ತದೆ ಜೊತೆಗೆ ಬದುಕಿಗೆ ಬೇಕಾದ ಜೀವನ ಮೌಲ್ಯಗಳು ವೃದ್ಧಿಯಾಗುತ್ತದೆ ಎಂದರು. ಪೋಷಕರಿಗೆ ಚುಟುಕು ಮನೋರಂಜನ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತ ಪುಟಾಣಿ ಕ್ರೀಡಾಳುಗಳಿಗೆ ಬಹುಮಾನ ವಿತರಿಸಲಾಯಿತು. ಜಿ ಎಮ್ ಛತ್ರಛಾಯದಲ್ಲಿ ಪ್ರಿ ನರ್ಸರಿಯಿಂದ ಎರಡನೇ ತರಗತಿಯವರೆಗಿನ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಅತ್ಯಂತ ಆಸಕ್ತಿಯಿಂದ ಪಾಲ್ಗೊಂಡು ಕ್ರೀಡಾಸ್ಫೂರ್ತಿಯನ್ನು ಮೆರೆದರು. ವಿದ್ಯಾ ಹೌಸ್ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಕ್ರೀಡಾಕೂಟದಲ್ಲಿ ಆಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಶ್ರೀಮಾ ಪ್ರಣವ್ ಶೆಟ್ಟಿ, ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.














































































































