ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು, ರೋಟರಿ ಕ್ಲಬ್ ಕಾರ್ಕಳ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರಚಿಕಿತ್ಸಾ ಶಿಬಿರವು ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು ಕಾರ್ಕಳ ಇಲ್ಲಿ ನಡೆಯಿತು. ಕುಕ್ಕುಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಯು ಅವರ ಅಧ್ಯಕ್ಷತೆಯಲ್ಲಿ ನಡೆದ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ಕಣ್ಣು ದೇಹದ ಅಮೂಲ್ಯವಾದ ಅಂಗ. ಇದರ ಬಗ್ಗೆ ಗ್ರಾಮೀಣ ಜನರಿಗೆ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕೆಲಸ ಆಗಬೇಕಾಗಿದೆ. ಇದರಲ್ಲಿ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದರು.

ಕಾರ್ಕಳ ತಾಲೂಕು ಆರೋಗ್ಯ ಅಧಿಕಾರಿ ಸಂದೀಪ್ ಕುಡ್ವ ಮಾತನಾಡುತ್ತಾ, ಈಗಿನ ಜೀವನ ಶೈಲಿ, ಕೆಲಸದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇಂಥ ಕಾರ್ಯಕ್ರಮಗಳಿಗೆ ಸ್ವಯಂ ಸೇವಾ ಸಂಸ್ಥೆಗಳ ಸಹಕಾರ ಅತಿ ಅಗತ್ಯ ಎಂದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ ಬಂಗೇರಾ, ಪ್ರಸಾದ್ ನೇತ್ರಾಲಯದ ಡಾ. ಪ್ರೇಮ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಆಶಾ ಕಾರ್ಯಕರ್ತೆ ಸುನೀತಾ ಪೂಜಾರಿ ಪ್ರಾರ್ಥಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು ಇಲ್ಲಿನ ವೈದ್ಯಾಧಿಕಾರಿ ಡಾ. ಶ್ರೀವಿದ್ಯಾ ಎಸ್ ಕಿದಿಯೂರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕುಮುದಾವತಿ ನಿರೂಪಿಸಿದರು. ಶುಶ್ರೂಷಾಧಿಕಾರಿ ಅರ್ಚನಾ ವಂದಿಸಿದರು.
















































































































