ಯುಎಇ ಬಂಟ್ಸ್ ನ 48 ನೇ ವರ್ಷದ ಕೂಡುಕಟ್ಟ್ ‘ಭಾವೈಕ್ಯ’ ಬಂಟರ ಸಮಾಗಮ ಕಾರ್ಯಕ್ರಮದಲ್ಲಿ ಯುಎಇ ಬಂಟ್ಸ್ ಗಾಗಿ ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಂಟರಿಗೆ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿಯವರ ಪರಿಕಲ್ಪನೆಯ ಬಂಟ ಬ್ರಹ್ಮ, ಬಂಟ ಕಲಾ ಮಾಣಿಕ್ಯ ಮತ್ತು ಬಂಟ ಸೇವಾ ರತ್ನ ಪ್ರಶಸ್ತಿಯನ್ನು ಐದು ಮಂದಿ ಸಾಧಕರಿಗೆ ನೀಡಿ ಗೌರವಿಸಲಾಯಿತು. ಈ ಮರಳು ಭೂಮಿಯಲ್ಲಿ ಕಳೆದ ನಲವತ್ತ ನಾಲ್ಕು ವರ್ಷಗಳಿಂದ ಯುಎಇ ಬಂಟ್ಸ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದ ಸರ್ವೋತ್ತಮ ಶೆಟ್ಟಿ ದಂಪತಿಗಳಿಗೆ “ಬಂಟ ಬ್ರಹ್ಮ” ಪ್ರಶಸ್ತಿ ನೀಡಿ ಗೌರವಿಸಲಾಯಿತು.”ಬಂಟ ಕಲಾ ಮಾಣಿಕ್ಯ” ಪ್ರಶಸ್ತಿಯನ್ನು ಮರಳು ಭೂಮಿಯಲ್ಲಿ ಯಕ್ಷಗಾನವನ್ನು ಪೋಷಿಸಿಕೊಂಡು ಬರುತ್ತಿರುವ ದಿನೇಶ್ ಶೆಟ್ಟಿ ಕೊಟ್ಟಿಂಜ ದಂಪತಿ ಮತ್ತು ನಾಟಕ ರಂಗದ ನಿರ್ದೇಶಕ ವಿಶ್ವನಾಥ ಶೆಟ್ಟಿ ದಂಪತಿಗಳಿಗೆ ನೀಡಿ ಗೌರವಿಸಲಾಯಿತು.”ಬಂಟ ಸೇವಾ ರತ್ನ” ಪ್ರಶಸ್ತಿಯನ್ನು ಬಾಲಕೃಷ್ಣ ಶೆಟ್ಟಿ ಮಾಡೂರು ಗುತ್ತು ದಂಪತಿ ಮತ್ತು ವಸಂತ ಶೆಟ್ಟಿಯವರಿಗೆ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ಉಪಾಧ್ಯಕ್ಷರಾದ ಪ್ರೇಮ್ ನಾಥ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರವಿರಾಜ್ ಶೆಟ್ಟಿ ಹಾಗೂ ಸಲಹಾ ಸಮಿತಿಯ ಸದಸ್ಯರು ಮತ್ತು 2025ನೇ ಸಾಲಿನ ಸಂಘಟನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಆರ್.ಜೆ ನಯನಾ ಶೆಟ್ಟಿ ಮತ್ತು ಸಾಯಿಲ್ ರೈ ಕಾರ್ಯಕ್ರಮವನ್ನು ನಿರೂಪಿಸಿದರು.
ವರದಿ : ವಿಜಯಕುಮಾರ್ ಶೆಟ್ಟಿ ಗಾಣದಮೂಲೆ ದುಬೈ
















































































































