ಬಂಟರ ಯಾನೆ ನಾಡವರ ಮಾತೃ ಸಂಘ ದ.ಕ. ಮಂಗಳೂರು ಇದರ ವತಿಯಿಂದ ನಡೆಸಲ್ಪಡುವ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ವಾರ್ಷಿಕೋತ್ಸವ ಡಿಸೆಂಬರ್ 20 ರಂದು ಜರಗಲಿದೆ. ಸಂಜೆ 4 ಗಂಟೆಗೆ ಮಕ್ಕಳ ನೃತ್ಯೋತ್ಸವ ಆರಂಭವಾಗಲಿದೆ. ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮ ಆರಂಭವಾಗಲಿದ್ದು, ಸಂಸ್ಥೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಉಪವಿಭಾಗದ ಎ.ಸಿ ಸ್ಟೆಲ್ಲಾ ವರ್ಗೀಸ್ ಕಾರ್ಯಕ್ರಮವನ್ನು ಉದ್ಘಾಟನೆ ನೇರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಗಾಗಿ ಸುಳ್ಯ ಶಾರದಾ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಸ್ಪರ್ಣಕಲಾ, ಬಂಟರ ಯಾನೆ ನಾಡವರ ಮಾತೃ ಸಂಘ ತಾಲೂಕು ಸಮಿತಿ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹಕಾರ ರತ್ನ ದಂಬೆಕ್ಕಾನ ಸದಾಶಿವ ರೈ, ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣು ಪ್ರಸಾದ್, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿಶ್ರಾಂತ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ, ಹಿರಿಯ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಪೈ ಹಾಗೂ ದತ್ತಿನಿಧಿ ಪ್ರಾಯೋಜಕರಾದ ಸಂಜೀವ ಆಳ್ವ ಮಾಲಕರು ಮೂಕಾಂಬಿಕ ಗ್ಯಾಸ್ ಏಜೆನ್ಸಿಸ್ ಪುತ್ತೂರು, ಮನೋಹರ ರೈ ಎನ್ (ವಿಶ್ರಾಂತ ಮುಖ್ಯೋಪಾಧ್ಯಾಯರು ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು), ಶ್ರೀಮತಿ ಪ್ರತಿಮಾ ಹೆಗ್ಡೆ (ಡಾ. ಬಿ. ನಳಿನಿ ರೈಯವರ ಸುಪುತ್ರಿ) ರವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಗಂಟೆ 8 ರಿಂದ ಮಕ್ಕಳ ನೃತ್ಯೋತ್ಸವ ಮುಂದುವರಿಯಲಿದೆ ಎಂದು ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಉಮಾಪ್ರಸಾದ್ ರೈ

















































































































