ಕರುನಾಡ ಚಕ್ರವರ್ತಿ ಶಿವರಾಜ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸಿರುವ ಕನ್ನಡದ ಬಹು ನಿರೀಕ್ಷಿತ ಮಲ್ಟಿ ಸ್ಟಾರರ್ “45” ಚಿತ್ರ ಇದೇ ಡಿಸೆಂಬರ್ 25 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಸಹ ಬಿಡುಗಡೆಯಾಗಿದ್ದು, ನಿರೀಕ್ಷೆಗೂ ಮೀರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಎಲ್ಲಾ ಕಡೆಗಳಿಂದಲೂ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಾಡುಗಳಿಗೂ ಜನರು ಮನ ಸೋತಿದ್ದಾರೆ. ಅರ್ಜುನ್ ಜನ್ಯ ಅವರು ಮೂರು ವರ್ಷಗಳಿಂದ ಚಿತ್ರಕ್ಕಾಗಿ ಪಟ್ಟಿರುವ ಶ್ರಮ ಅಷ್ಟಿಷ್ಟಲ್ಲ.


ಮೂರು ವರ್ಷಗಳ ಶ್ರಮವನ್ನು ಈ ಸಿನಿಮಾಗೆ ಹಾಕಿರುವ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಚಿತ್ರವನ್ನು ಬಹಳ ಪ್ರೀತಿಯಿಂದ ನಿರ್ಮಾಣ ಮಾಡಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ನಟ ರಾಜ್ ಬಿ ಶೆಟ್ಟಿ, ಆರೋಗ್ಯದ ಸಮಸ್ಯೆ ಇದ್ದಾಗಲೂ ಚಿತ್ರವನ್ನು ಪೂರ್ಣ ಮಾಡಿದ ಶಿವರಾಜಕುಮಾರ್ ಹಾಗೂ ಅವರ ಕುಟುಂಬಕ್ಕೆ ಧನ್ಯವಾದ. ಶಿವರಾಜ ಕುಮಾರ್, ಉಪೇಂದ್ರ ಹಾಗೂ ನಾನು ಮೂವರು ಈ ಚಿತ್ರದಲ್ಲಿ ನಟಿಸಿದ್ದೇವೆ. ಆದರೆ ನಾನು ಎಂದಿಗೂ ಶಿವರಾಜಕುಮಾರ್ ಹಾಗೂ ಉಪೇಂದ್ರ ಅವರ ಅಭಿಮಾನಿ ಎಂದರು ನಟ ರಾಜ್ ಬಿ ಶೆಟ್ಟಿ.

ಕರ್ನಾಟಕದಲ್ಲಿ ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. 24 ರಂದು ಪ್ರೀಮಿಯರ್ ಶೋ ಗಳು ಇರುತ್ತದೆ ಎಂದು ವಿತರಕ ಸುಪ್ರೀತ್ ಹೇಳಿದರು. ಚಿತ್ರದಲ್ಲಿ ನಟಿಸಿರುವ ಪ್ರಮೋದ್ ಶೆಟ್ಟಿ, ಛಾಯಾಗ್ರಾಹಕ ಸತ್ಯ ಹೆಗಡೆ ಹಾಗೂ ವಿ.ಎಫ್.ಎಕ್ಸ್ ಮಾಡಿರುವ ಯಶ್ ಶೆಟ್ಟಿ, ಫರ್ನಸ್ ಇರಾನ್ ಮತ್ತು ತಂಡದವರು “45” ಚಿತ್ರದ ಕುರಿತು ಮಾತನಾಡಿದರು.

















































































































