ಡ್ರಗ್ಸ್ ಮುಕ್ತ ಕರ್ನಾಟಕ ಜನಜಾಗೃತಿ ರಥ ಯಾತ್ರೆ ನಿಟ್ಟೆಗೆ ಆಗಮಿಸಿದಾಗ ರೋಟರಿ ಕ್ಲಬ್ ಕಾರ್ಕಳ ಹಾಗೂ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ನಿಟ್ಟೆ ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ವೀಣಾಕುಮಾರಿ ಬಿ.ಕೆ, ಉಪನ್ಯಾಸಕ ಪ್ರಕಾಶ್ ಬಿ., ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಶೆಣೈ ಮಾತನಾಡಿ, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದ ಸೇವನೆಯ ದುಷ್ಪರಿಣಾಮಗಳು ಹಾಗೂ ಅದನ್ನು ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕಾರ್ಕಳ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಸಮುದಾಯ ಸೇವಾ ಚೇರ್ಮನ್ ವಸಂತ್ ಎಂ, ರಾಕ್ ಸಿಟಿ ಅಧ್ಯಕ್ಷ ಸುರೇಂದ್ರ ನಾಯಕ್, ಚಿರಾಗ್ ರಾವ್ ಉಪಸ್ಥಿತರಿದ್ದರು.

















































































































