
ಬಂಟ್ಸ್ ಅಸೋಸಿಯೇಷನ್ ಪುಣೆಯ ಸಮಾಜ ಕಲ್ಯಾಣ ಸೇವಾ ಕಾರ್ಯದಂಗವಾಗಿ ಪುಣೆಯ ಸಮಸ್ತ ಬಂಟ ಸಮಾಜ ಬಾಂಧವರಿಗಾಗಿ ಮಲ್ಟಿ ಸ್ಪೆಷಾಲಿಟಿ ಉಚಿತ ಅರೋಗ್ಯ ತಪಾಸಣಾ ಶಿಬಿರವನ್ನು ಜನವರಿ 11 ರವಿವಾರದಂದು ಬೆಳಿಗ್ಗೆ ಗಂಟೆ 9.00 ರಿಂದ ಮಧ್ಯಾಹ್ನ ಗಂಟೆ 12.30 ರವರೆಗೆ ಗುರುನಾನಕ್ ಮೆಡಿಕಲ್ ಫೌಂಡೇಶನ್ ನ ಗುರುನಾನಕ್ ದರ್ಬಾರ್ ಹಾಲ್ (ಹಾಲಿವುಡ್ ಗುರುದ್ವಾರ) ಕ್ಯಾಂಪ್ ಪುಣೆ ಇಲ್ಲಿ ಆಯೋಜಿಸಲಾಗಿದೆ. ಪ್ರತಿ ವರ್ಷದಂತೆ ಪುಣೆ ಬಂಟ್ಸ್ ಅಸೋಸಿಯೇಷನ್ ಅಯೋಜನೆಯಲ್ಲಿ ಗುರುನಾನಕ್ ಮೆಡಿಕಲ್ ಫೌಂಡೇಶನ್ ಸಹಯೋಗದೊಂದಿಗೆ ನಡೆಯಲಿರುವ ಈ ಉಚಿತ ಅರೋಗ್ಯ ತಪಾಸಣಾ ಶಿಬಿರದಲ್ಲಿ ಮಲ್ಟಿ ಸ್ಪೆಷಾಲಿಟಿ ಆರೋಗ್ಯ ತಪಾಸಣೆ, ಸ್ತ್ರೀರೋಗ ಶಾಸ್ತ್ರ, ಮಕ್ಕಳ ರೋಗ ತಪಾಸಣೆ, ಕಣ್ಣು, ಹಲ್ಲು ತಪಾಸಣೆ, ಔಷದಿ ಮತ್ತು ರೋಗಶಾಸ್ತ್ರದ ಬಗ್ಗೆ ಮಾಹಿತಿ, ತುರ್ತು ರೋಗಿಗಳಿಗೆ ಉಚಿತ ECG ಮತ್ತು ಉಚಿತ ಸಕ್ಕರೆ ರೋಗ ತಪಾಸಣೆ ನಡೆಯಲಿದೆ. ಪುಣೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ರೋಹಿತ್ ಶೆಟ್ಟಿ ನಗ್ರಿಗುತ್ತು ಮತ್ತು ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ, ಯುವ ವಿಭಾಗದವರ ಆಯೋಜನೆಯಲ್ಲಿ ನಡೆಯಲಿರುವ ಈ ಅರೋಗ್ಯ ತಪಾಸಣಾ ಶಿಬಿರವು ಬಂಟ್ಸ್ ಅಸೋಸಿಯೇಷನ್ ಉಪಾಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿಯವರ ಸಂಯೋಜನೆಯಲ್ಲಿ ನಡೆಯಲಿರುವುದು.

ಈ ಅರೋಗ್ಯ ತಪಸಣಾ ಶಿಬಿರದ ವೈದ್ಯಕೀಯ ಸಲಹೆಗಾರರ ಬೋರ್ಡ್ ನ ಪ್ರಮುಖರಾದ ಡಾ. ಹಂಸರಾಜ್ ಶೆಟ್ಟಿ, ಡಾ. ಸಂಜಯ್ ಕುಲಕರ್ಣಿ, ಡಾ. ಸುಜಯ್ ಹೆಗ್ಡೆ, ಡಾ. ಜ್ಯೋತಿ ಶೆಟ್ಟಿ, ಡಾ. ಪ್ರವೀಣ್ ಕುಮಾರ್ ಅರ್ ಶೆಟ್ಟಿ, ಡಾ. ವಿವೇಕ್ ಹೆಗ್ಡೆ, ಡಾ. ಸಂಜಯ್ ತೆಕವಡೆಯವರ ಸಲಹೆಯೊಂದಿಗೆ ಪುಣೆಯ ಖ್ಯಾತ ವೈದ್ಯರುಗಳಾದ ಡಾ. ಚಿತ್ತರಂಜನ್ ಶೆಟ್ಟಿ, ಡಾ. ಸುಧಾಕರ್ ಶೆಟ್ಟಿ, ಡಾ. ಉರ್ವಿ ಕೊಥಾರಿ, ಡಾ. ರೋಬರ್ಟ್ ಲೋಬೊ, ಡಾ. ವಿಕಾಸ್ ಮಂತೋಲೆ, ಡಾ. ಸಮಿತಾ ಮೂಲಾನಿ, ಡಾ. ಸತ್ಯಶೀಲ ನ್ಯಾಕ್ ರವರು ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಸಲಹೆ ನೀಡಲಿದ್ದಾರೆ. ವೈದ್ಯಕೀಯ ತಪಾಸಣೆಯಲ್ಲಿ ವಿವಿಧ ವಿಭಾಗಗಳ ಡಾಕ್ಟರ್ಸ್ ಉಪಸ್ಥಿತರಿದ್ದು, ಹಲವಾರು ರೀತಿಯ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಲಿರುವ ಈ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯ ಬಂಟ ಸಮಾಜ ಬಾಂಧವರು ಇದರ ಸದುಪಯೋಗ ಪಡೆಯಬೇಕೆಂದು ಪುಣೆ ಬಂಟ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ರೋಹಿತ್ ಶೆಟ್ಟಿ ನಗ್ರಿಗುತ್ತು, ನಿಕಟಪೂರ್ವ ಅಧ್ಯಕ್ಷರಾದ ಗಣೇಶ್ ಹೆಗ್ಡೆ ಪುಣ್ಚೂರು, ಉಪಾಧ್ಯಕ್ಷರುಗಳಾದ ಡಾ. ಸುಧಾಕರ್ ಶೆಟ್ಟಿ, ಸತೀಶ್ ರೈ ಕಲ್ಲಂಗಳ ಗುತ್ತು, ಪ್ರ ಕಾರ್ಯದರ್ಶಿ ದಿನೇಶ್ ಶೆಟ್ಟಿ ಪೆಲತ್ತೂರು ಮೇಲ್ಮನೆ, ಕೋಶಾಧಿಕಾರಿ ಸಿಎ ಮನೋಹರ್ ಶೆಟ್ಟಿ, ಮಹಿಳಾ ಕಾರ್ಯಾಧ್ಯಕ್ಷೆ ರೇಷ್ಮಾ ಅರ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅದೀಪ್ ಶೆಟ್ಟಿ ಮತ್ತು ಸಮಿತಿ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ರೋಹಿತ್ ಶೆಟ್ಟಿ [9960337625], ಡಾ. ಸುಧಾಕರ್ ಶೆಟ್ಟಿ [9657616322 ], ದಿನೇಶ್ ಶೆಟ್ಟಿ [9823019020], ರೇಷ್ಮಾ ಅರ್ ಶೆಟ್ಟಿ [9881461181 ] ಯವರನ್ನು ಸಂಪರ್ಕಿಸಬಹುದು.
ವರದಿ : ಹರೀಶ್ ಮೂಡುಬಿದ್ರೆ





















































































































