ಗಣಿತನಗರ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-೪೪, ಜನವರಿ ೧೩ರ ಮಂಗಳವಾರದ0ದು ಸ0ಜೆ ೦೬.೧೫ಕ್ಕೆ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ೯೨.೭ ಬಿಗ್ ಎಫ್ಎಂನ ರೆಡಿಯೋ ಜಾಕಿ ಆರ್.ಜೆ. ನಯನರವರು ‘ಯುವಮನಸ್ಸುಗಳಿಗೆ ಒಂದಿಷ್ಟು ಮಾತು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಭಾಗವಹಿಸಬಹುದೆಂದು ಸAಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

















































































































