ಬಂಟ್ವಾಳ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟರ ಭವನದ ಕ್ರೀಡಾಂಗಣದಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟದಲ್ಲಿ ಮಾಣಿ ವಲಯ ಬಂಟರ ಸಂಘವು ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಪುರುಷರ ಲಗೋರಿಯಲ್ಲಿ ಪ್ರಥಮ, ಮಹಿಳೆಯರ ಲಗೋರಿಯಲ್ಲಿ ಪ್ರಥಮ, ಪುರುಷರ ವಾಲಿಬಾಲ್ ನಲ್ಲಿ ದ್ವಿತೀಯ, ಪುರುಷದ ಹಗ್ಗ ಜಗ್ಗಾಟದಲ್ಲಿ ದ್ವಿತೀಯ ಸ್ಥಾನ ಹಾಗೂ ವೈಯುಕ್ತಿಕ ವಿಭಾಗದಲ್ಲಿ ಹಲವು ಬಹುಮಾನಗಳನ್ನು ಗಳಿಸುವ ಮೂಲಕ ಸಮಗ್ರ ಪ್ರಶಸ್ತಿಯನ್ನು ಗಳಿಸಿದೆ. ಕಲ್ಲಡ್ಕ ವಲಯ ಬಂಟರ ಸಂಘವು ದ್ವಿತೀಯ ಸ್ಥಾನವನ್ನು ಗಳಿಸಿದೆ. ಮಾಜಿ ಸಚಿವ ಬಿ ರಮಾನಾಥ ರೈ, ಶಾಸಕ ರಾಜೇಶ್ ನಾಯ್ಕ್, ಉದ್ಯಮಿ ಸದಾನಂದ ಭಂಡಾರಿ, ಬಂಟ್ವಾಳ ಬಂಟರ ಸಂಘದ ಯುವ ವಿಭಾಗದ ಸ್ಥಾಪಕ ಅಧ್ಯಕ್ಷ ಹರೀಶ್ ಶೆಟ್ಟಿ ಬಂಟ್ವಾಳ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಣಿ ಸಾಗು ಉಮೇಶ್ ಮಹಾಬಲ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿದ್ದರು.

ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಮಾಜಿ ಅಧ್ಯಕ್ಷರುಗಳಾದ ಕಿರಣ್ ಹೆಗ್ಡೆ ಅನಂತಾಡಿ, ಲೋಕನಾಥ ಶೆಟ್ಟಿ ಬಿಸಿ ರೋಡು, ಚಂದ್ರಹಾಸ ಡಿ ಶೆಟ್ಟಿ ರಂಗೋಲಿ, ಉಪಾಧ್ಯಕ್ಷ ಐತಪ್ಪ ಆಳ್ವ ಸುಜೀರು ಗುತ್ತು, ಕಾರ್ಯದರ್ಶಿ ಸದಾನಂದ ಆಳ್ವ ಕಂಪ, ಜೊತೆ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ, ಜೊತೆ ಕೋಶಾಧಿಕಾರಿ ಶ್ರೀವಿದ್ಯಾ ಅಶ್ವನಿ ರೈ, ಮಹಿಳಾ ವಿಭಾಗದ ಅಧ್ಯಕ್ಷೆ ಸುಜಾತಾ ಪಿ ರೈ, ಯುವ ವಿಭಾಗದ ಅಧ್ಯಕ್ಷ ಗೋಕುಲ್ ಭಂಡಾರಿ, ಕ್ರೀಡೋತ್ಸವ ಸಮಿತಿ ಸಂಚಾಲಕ ಗಂಗಾಧರ ರೈ ತುಂಗೆರೆಕೋಡಿ, ಸಹ ಸಂಚಾಲಕ ಜಗದೀಶ ರೈ ತುಂಬೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಮುಖರಾದ ಮಾಣಿ ಗುತ್ತು ಸಚಿನ್ ರೈ, ಮಾಣಿ ವಲಯ ಬಂಟರ ಸಂಘದ ಗೌರವಾಧ್ಯಕ್ಷೆ ಪ್ರಪುಲ್ಲ ಆರ್ ರೈ, ಅಧ್ಯಕ್ಷ ಮಾದವ ರೈ ಅಮೈ ಬಂಡಸಾಲೆ, ಕಾರ್ಯದರ್ಶಿ ನಿರಂಜನ್ ರೈ ಕುರ್ಲೆತ್ತಿಮಾರು, ಕೋಶಾಧಿಕಾರಿ ಸುಧಾಕರ ಶೆಟ್ಟಿ ವಾರಾಟ, ಮಾಜಿ ಅಧ್ಯಕ್ಷರುಗಳಾದ ಬಾಲಕೃಷ್ಣ ಆಳ್ವ ಕೊಡಾಜೆ, ಪ್ರವೀಣ್ ರೈ ಕಲ್ಲಾಜೆ, ಗಂಗಾಧರ ರೈ, ತಾಲೂಕು ಮಹಿಳಾ ವಿಭಾಗದ ಉಪಾಧ್ಯಕ್ಷೆ ಜ್ಯೋತಿ ಎನ್ ಹೆಗ್ಡೆ, ಪುಷ್ಪರಾಜ್ ಹೆಗ್ಡೆ ಸತ್ತಿಕಲ್ಲು, ಬಾಲಕೃಷ್ಣ ಶೆಟ್ಟಿ ಪಾಂಡಿಬೆಟ್ಟು, ಪುಷ್ಪರಾಜ್ ಚೌಟ ಬದಿಗುಡ್ಡೆ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಪ್ರಶಸ್ತಿ ಸ್ವೀಕರಿಸಿದ ತಂಡದಲ್ಲಿದ್ದರು.

















































































































