
ಬೆಂಗಳೂರಿನ ಯೂನಿವರ್ಸಲ್ ಕೋಚಿಂಗ್ ಸೆಂಟರ್ 25ನೇ ವಾರ್ಷಿಕ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದು, ಆ ಪ್ರಯುಕ್ತ ಜನವರಿ 24ರಂದು ಸಂಜೆ 5:00 ಗಂಟೆಗೆ ಸಂಸ್ಥಾಪಕರ ದಿನ ಕಾರ್ಯಕ್ರಮ ಹಮ್ಮಿಕೊಂಡಿದೆ. ತಾವರಕೆರೆ ಹೋಬಳಿ ಕೊಲೂರಿನ ಗುರುರಾಯನಪುರದಲ್ಲಿನ ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಂಸದ ಯದುವೀರ ಒಡೆಯರ್ ಉದ್ಘಾಟಿಸಲಿದ್ದು, ಎಮ್.ಆರ್.ಜಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ| ಕೆ ಪ್ರಕಾಶ್ ಶೆಟ್ಟಿ, ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್, ಸಿಜಿಎಸ್ಟಿ ಆಯುಕ್ತ ಡಾ| ಎಂ ಕೊಟ್ರಸ್ವಾಮಿ, ಅನ್ನರ್ಕುಂಗಾ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಅಶೋಕ್ ಚನ್ನೇಗೌಡ, ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಬೆಂಗಳೂರು ಸಂಸ್ಥೆಯ ಅಧ್ಯಕ್ಷ ಆರ್ ಉಪೇಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ. ಈ ಸಂಸ್ಥಾಪಕರ ದಿನಾಚರಣೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಥೆಯ ಸಾಧನೆ ಮತ್ತು ಬೆಳವಣಿಗೆಯನ್ನು ಇನ್ನಷ್ಟು ಬಲಪಡಿಸುವ ಮಹತ್ವದ ವೇದಿಕೆಯಾಗಲಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ.



















































































































