
ಫೆಬ್ರವರಿ 7 ಮತ್ತು 8 ರಂದು ನಡೆಯಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ಜಾತ್ರೋತ್ಸವದ ಅಮಂತ್ರಣ ಪತ್ರವನ್ನು ಮಾಜಿ ಸಂಸದ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಜನವರಿ 29 ರಂದು ಅವರ ಕುಂಜಾಡಿ ಮನೆಯಲ್ಲಿ ನೀಡಿ, ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ಸವಣೂರುಗುತ್ತು ವೆಂಕಪ್ಪ ಶೆಟ್ಟಿ, ಪ್ರಮುಖರಾದ ಚೇತನ್ ಕುಮಾರ್ ಕೋಡಿಬೈಲು, ಉಮಾಪ್ರಸಾದ್ ರೈ ನಡುಬೈಲು, ಸತೀಶ್ ಬಲ್ಯಾಯ ಕನ್ನಡಕುಮೇರು, ಸುರೇಶ್ ರೈ ಸೂಡಿಮುಳ್ಳು, ಸುಪ್ರೀತ್ ರೈ ಖಂಡಿಗ, ಕೀರ್ತನ್ ಕುಮಾರ್ ಕೋಡಿಬೈಲು, ರಾಮಕೃಷ್ಣ ಪ್ರಭು ಸವಣೂರು, ಕುಲಪ್ರಕಾಶ್ ಮೆದು ಹಾಗೂ ಸಂತೋಷ್ ರೈ ಕಲಾಯಿ ಉಪಸ್ಥಿತರಿದ್ದರು.

ಚಿತ್ರ, ವರದಿ : ಉಮಾಪ್ರಸಾದ್ ರೈ ನಡುಬೈಲು





















































































































