
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿಯವರ ಧರ್ಮಪತ್ನಿ, ಆಸರೆ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷೆ ಡಾ. ಆಶಾಜ್ಯೋತಿ ರೈ ಅವರು ವೀರ ರಾಣಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆ ಆಗಿದ್ದಾರೆ. ABRSM- KRMSS, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಮಂಗಳೂರು ವಿಭಾಗ) ಆಯೋಜಿರುವ ಅಬ್ಬಕ್ಕ 500 ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

ಇವರ ಧಾರ್ಮಿಕ ರಂಗ, ವೈದ್ಯಕೀಯ ರಂಗ ಹಾಗೂ ಸಮಾಜ ಸೇವೆಗೆ ವೀರರಾಣಿ ಅಬ್ಬಕ್ಕ ಪ್ರಶಸ್ತಿಯ ಗೌರವವು ಇನ್ನಷ್ಟು ಉತ್ತುಂಗಕ್ಕೆ ಏರಲು ಅನುವು ಮಾಡಿಕೊಟ್ಟಂತಾಗಿದೆ. ಪ್ರಶಸ್ತಿ ಪ್ರಧಾನ ಸಮಾರಂಭವು ಫೆಬ್ರವರಿ 16 ರಂದು ಪುತ್ತೂರು ನೆಹರೂ ನಗರದ ವಿವೇಕಾನಂದ ಸಭಾಂಗಣದಲ್ಲಿ ನಡೆಯಲಿದೆ.





















































































































