
ಉಳ್ಳಾಲದ ಧೀರ ರಾಣಿ ಅಬ್ಬಕ್ಕ ಚೌಟ ಕರಾವಳಿ ಅರಸರಿಂದ ಕಪ್ಪ ಸಂಗ್ರಹಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ ಶೂರ ನಾಯಕಿಯಾಗಿ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ಅವರ ಆದರ್ಶಗಳು ಮುಂದಿನ ಪೀಳಿಗೆಗೆ ದಾರಿದೀಪವಾಗಲಿ ಎಂದು ರಾಣಿ ಅಬ್ಬಕ್ಕ ವಂಶಸ್ಥೆ ಅನಿತಾ ಸುರೇಂದ್ರ ಕುಮಾರ್ ಹೇಳಿದರು. ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ರಂಗಮಂದಿರದಲ್ಲಿ ವೀರರಾಣಿ ಅಬ್ಬಕ್ಕ ಉತ್ಸವ ಉದ್ಘಾಟಿಸಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಮಾತನಾಡಿದರು. ಹಾವೇರಿ ವಿವಿ ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಅಭಿನಂದನಾ ಭಾಷಣ ಮಾಡಿದರು. ಆಶಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷೆ ಡಾ. ಆಶಾಜ್ಯೋತಿ ರೈ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದರು.

ನಗರಸಭೆ ಪೌರಾಯುಕ್ತ ಸಂತೋಷ್, ರೈತ ಮುಖಂಡ ಕೃಷ್ಣಪ್ಪ ಸಾಲಿಯಾನ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಕೋಟೆಕಾರ್ ಪಪಂ ಅಧ್ಯಕ್ಷೆ ದಿವ್ಯಾ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸೋಮೇಶ್ವರ ಪುರಸಭೆ ಉಪಾಧ್ಯಕ್ಷ ರವಿಶಂಕರ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್, ಶ್ರೀ ಚೀರುಂಭ ಭಗವತಿ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ, ಯಶವಂತ ಅಮೀನ್, ಪೆರ್ಮನ್ನೂರು ಚರ್ಚ್ ಧರ್ಮಗುರು ಸಿಪ್ರಿಯನ್ ಪಿಂಟೋ, ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಉಪಾಧ್ಯಕ್ಷೆ ದೇವಕಿ ಆರ್.ಉಳ್ಳಾಲ, ಗೌರವ ಉಪಾಧ್ಯಕ್ಷ ಸದಾನಂದ ಬಂಗೇರ ಮತ್ತಿತರರು ಉಪಸ್ಥಿತರಿದ್ದರು. ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ್ ಸ್ವಾಗತಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ಜಯರಾಮ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಆನಂದ ಕೆ ಅಸೈಗೋಳಿ ವಂದಿಸಿದರು. ಧನಲಕ್ಷ್ಮೀ ಗಟ್ಟಿ, ಕೆಎಂಕೆ ಮಂಜನಾಡಿ ನಿರೂಪಿಸಿದರು.
ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ನಿಟ್ಟೆ ವಿಶ್ವವಿದ್ಯಾಲಯ ಮಾನವಿಕ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಸಾಯಿಗೀತಾ ಹೆಗ್ಡೆ ಹಾಗೂ ಭರತನಾಟ್ಯ ಕ್ಷೇತ್ರದ ಸಾಧನೆಗಾಗಿ ನಾಟ್ಯ ನಿಕೇತನ ನೃತ್ಯ ಸಂಸ್ಥೆಯ ಪ್ರಾಂಶುಪಾಲೆ ರಾಜಶ್ರೀ ಉಳ್ಳಾಲ್ ಅವರಿಗೆ ವೀರರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
























































































































