
ಮೊಳಹಳ್ಳಿ ದಿನೇಶ್ ಹೆಗ್ಡೆ ಅವರ ಜನ್ಮ ದಿನದ ಶುಭ ಸಂದರ್ಭದಲ್ಲಿ, ಬಿದ್ಕಲ್ಕಟ್ಟೆಯ ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಸಭಾಂಗಣದಲ್ಲಿ ‘ಬೃಹತ್ ರಕ್ತದಾನ ಶಿಬಿರ’ಕ್ಕೆ ಚಾಲನೆ ನೀಡಲಾಯಿತು. ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ.) ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಹಿರಿಯ ಸ್ಥಳೀಯ ಮುಖಂಡರು ಹಾಗೂ ಅಭಿಮಾನಿಗಳು ಭಾಗವಹಿಸಿ, ರಕ್ತದಾನ ಮಾಡುವ ಮೂಲಕ ದಿನೇಶ್ ಹೆಗ್ಡೆಯವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು.


ಕಾರ್ಯಕ್ರಮದ ಕೊನೆಗೆ ರಕ್ತದಾನ ಮಾಡಿ ಜೀವ ಉಳಿಸುವ ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲಾ ರಕ್ತದಾನಿಗಳಿಗೆ ಮತ್ತು ಹಿತೈಷಿಗಳಿಗೆ ದಿನೇಶ್ ಹೆಗ್ಡೆಯವರು ಧನ್ಯವಾದಗಳನ್ನು ಅರ್ಪಿಸಿದರು.

























































































































