
ಮಾರ್ಚ್ 1 ರಂದು ಆದಿತ್ಯವಾರ ಬಂಟ್ಸ್ ಹಾಸ್ಟೆಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಸಭೆಯು ಜರಗಿತು. ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ವಹಿಸಿದ್ದರು. ಸಭೆಯು ಸುರೇಶ್ ಶೆಟ್ಟಿ ಶಿಬರೂರು ಇವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಸಭೆಯಲ್ಲಿ ದಾನಿಗಳಾದ ತೋನ್ಸೆ ಆನಂದ್ ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ, ರಾಜೇಂದ್ರ ವಿ ಶೆಟ್ಟಿ ಪಂಜುರ್ಲಿ ಗ್ರೂಪ್ಸ್, ಶಶಿಧರ್ ಶೆಟ್ಟಿ ಇನ್ನಂಜೆ, ಉದಯ್ ಕುಮಾರ್ ಶೆಟ್ಟಿ ಮುನಿಯಾಲ್ ಹಾಗೂ ಸದಸ್ಯರಾದ ವಸಂತ್ ಶೆಟ್ಟಿ ಜಪ್ಪು, ಕರ್ನಲ್ ಶರತ್ ಭಂಡಾರಿ, ಸುಕುಮಾರ್ ಶೆಟ್ಟಿ ಮುಂಬೈ, ವಿಶಾಕ್ ಶೆಟ್ಟಿ, ಮೋಹನ್ ಶೆಟ್ಟಿ ಮೂಡನಿಡಂಬೂರು, ಜಯರಾಮ್ ಸಾಂತ ಇವರುಗಳು ಒಕ್ಕೂಟದ ಕಾರ್ಯವೈಖರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಉತ್ತಮ ಸಲಹೆ ಸೂಚನೆ ನೀಡಿದರು.


ವೇದಿಕೆಯಲ್ಲಿ ಒಕ್ಕೂಟದ ದಾನಿಗಳಾದ ತೋನ್ಸೆ ಆನಂದ್ ಎಂ. ಶೆಟ್ಟಿ, ಪ್ರವೀಣ್ ಭೋಜ ಶೆಟ್ಟಿ, ರಾಜೇಶ್ ಶೆಟ್ಟಿ ರಾಕ್ಷಿ ಡೆವಲಪರ್ಸ್, ಬೆಳ್ಳಾಡಿ ಅಶೋಕ್ ಶೆಟ್ಟಿ, ಅರವಿಂದ್ ಆನಂದ್ ಶೆಟ್ಟಿ, ರಾಜೇಂದ್ರ ಶೆಟ್ಟಿ ಪಂಜುರ್ಲಿ ಗ್ರೂಪ್ಸ್, ಶಶಿಧರ್ ಶೆಟ್ಟಿ ಇನ್ನoಜೆ, ಗಿರೀಶ್ ಶೆಟ್ಟಿ ತೆಳ್ಳಾರ್, ಹರೀಶ್ ಶೆಟ್ಟಿ ಪಡುಕುಡೂರು, ಉದಯ್ ಕುಮಾರ್ ಶೆಟ್ಟಿ ಮುನಿಯಾಲ್, ರತ್ನ ಪಿ. ಶೆಟ್ಟಿ, ಚಿತ್ರ ಆರ್. ಶೆಟ್ಟಿ, ಹುಂತ್ರಿಕೆ ಸುಧಾಕರ್ ಶೆಟ್ಟಿ, ಅಕ್ಕುಂಜೆ ಸತೀಶಚಂದ್ರ ಶೆಟ್ಟಿ, ಸನ್ಮಿತ್ ಬಾಬು ಶೆಟ್ಟಿ, ಸುದೇಶ್ ವಿ ಶೆಟ್ಟಿ, ರಾಜೇಶ್ ಶೆಟ್ಟಿ ತೆಳ್ಳಾರ್, ಹರಿಪ್ರಸಾದ್ ರೈ, ಮಂಜುನಾಥ್ ಶೆಟ್ಟಿ ಕೊಡ್ಲಾಡಿ, ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ, ಶ್ರೀಧರ್ ಶೆಟ್ಟಿ ಆರೂರು, ಸದಸ್ಯರಾದ ಆನಂದ್ ಶೆಟ್ಟಿ ಕಾವೂರು ಸೇರಿದಂತೆ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಇವರುಗಳು ಉಪಸ್ಥಿತರಿದ್ದರು.


ಸಭೆಯಲ್ಲಿ ವಿವಿಧ ಬಂಟರ ಸಂಘಗಳ ಪ್ರತಿನಿಧಿಗಳಾಗಿ ಭಾಗವಹಿಸಿದ ಬಂಟರ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು ಹಾಗೂ ಪೋಷಕ ಸದಸ್ಯರು ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಿದರು.

























































































































